ಸ್ಪೀಕರ್ ಯು.ಟಿ. ಖಾದರ್ ಅವರು ಪವಿತ್ರ ಈದುಲ್ ಫಿತ್ರ್ ಹಬ್ಬದ ಅಂಗವಾಗಿ ರಾಜ್ಯದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ರಮಝಾನ್ ತಿಂಗಳ ಉಪವಾಸ, ಪ್ರಾರ್ಥನೆ ಮತ್ತು ದಾನಧರ್ಮದ ನಂತರ ಬರುವ ಈದುಲ್ ಫಿತ್ರ್ ಹಬ್ಬವು ಸಹೋದರತ್ವ, ಶಾಂತಿ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ. ಈ ಪವಿತ್ರ ಹಬ್ಬವು ಸಮಾಜದಲ್ಲಿ ಪರಸ್ಪರ ಪ್ರೀತಿ-ವಿಶ್ವಾಸ ಹೆಚ್ಚಿಸಿ ಸೌಹಾರ್ದತೆಯನ್ನು ಬಲಪಡಿಸಲಿ ಎಂದು ಅವರು ಆಶಿಸಿದರು.
ಎಲ್ಲಾ ಸಮುದಾಯದವರು ಐಕ್ಯತೆಯಿಂದ ಬದುಕಿ, ನಾಡಿನಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

