ಉಳ್ಳಾಲ: ರಾಜ್ಯ ವ್ಯಾಪಿ ಕಾರ್ಮಿಕ ಕೋರ್ಡ್ ವಿರುದ್ಧ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗುವಂತೆ ಜಾರಿಗೊಳಿಸಲಾಗುತ್ತಿರುವ ಕಾರ್ಮಿಕ ಕೋಡ್ ಅನ್ನು ಹಿಂತೆಗೆದುಕೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತೆ, ವೇತನ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಕಾಪಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿನಿಧಿಗಳು ಮನವಿ ಸಲ್ಲಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಳ್ಳಾಲ ವಲಯ ಅಧ್ಯಕ್ಷರಾದ ಜನಾರ್ಧನ್ ಕುತ್ತಾರ್, ಕಾರ್ಯದರ್ಶಿ ಚಂದ್ರಹಾಸ್ ಪಿಲಾರ್, ಕೋಶಾಧಿಕಾರಿ ರೋಹಿದಾಸ್ ಬಟ್ನಗರ, ಉಪಾಧ್ಯಕ್ಷರಾದ ರಾಮಚಂದ್ರ ಪಜೀರ್ ಹಾಗೂ ಇಬ್ರಾಹಿಂ ಮದಕ ಉಪಸ್ಥಿತರಿದ್ದರು.


