ಮಂಗಳೂರು: ಮಂಗಳೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎAಎ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತೊಕ್ಕೊಟ್ಟು ನಿವಾಸಿಗಳಾದ ಹೈದರ್ ಅಲಿಯಾಸ್ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಪಂಪ್‌ವೆಲ್ ನಿವಾಸಿ ಜೈಸನ್ ಮೆನೆಜಸ್ (26) ಅವgನ್ನು ಬಂಧಿಸಲಾಗಿದೆ.

ಮಂಗಳೂರು ನಗರಕ್ಕೆ ಎಂಡಿಎoಎ ಮಾದಕ ವಸ್ತುವನ್ನು ತಂದು ಆಟೋ ರಿಕ್ಷಾದಲ್ಲಿ ಪಂಪವೆಲ್ ಎಕ್ಕೂರು ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು.
ಬಂಧಿತರಿAದ ಸುಮಾರು 26 ಗ್ರಾಂ ತೂಕದ ಎಂಡಿಎAಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್, ತೂಕಮಾಪನ ಯಂತ್ರ ಹಾಗೂKA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಹೈದರ್ ಅಲಿ ವಿರುದ್ಧ ಈ ಹಿಂದೆ ಮಾದಕ ವಸ್ತು ಮಾರಾಟ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

