Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

UllalaVaniBy UllalaVaniMarch 24, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ ಆರೋಪಗಳು ಕೇಳಿಬಂದಿವೆ. ಸರ್ಕಾರದ ಆದೇಶದಿಂದ ತಮ್ಮ ಮೇಲೆ ಅನ್ಯಾಯವಾಗಿದ್ದು, ಇದು ಉದ್ಯೋಗಕ್ಕೆ ಹೊಡೆತ ನೀಡಿದಂತಾಗಿದೆ ಎಂದು ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಆನಂದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ರಾಜ್ಯ ಸರ್ಕಾರ ತುರ್ತಾಗಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯಗೊಳಿಸಿತ್ತು. ಈಗಾಗಲೇ ಹಲವು ನಿಯಮಗಳನ್ನು ಪಾಲಿಸಿಕೊಂಡು ಬಂದಿರುವ ಚಾಲಕರಿಗೆ ಈ ಹೊಸ ನಿಯಮ ಹೆಚ್ಚುವರಿ ಆರ್ಥಿಕ ಹೊರೆ ತಂದಿದೆ ಎಂದರು.
ಚಾಲಕರ ಮಾಹಿತಿಯಂತೆ ಪ್ಯಾನಿಕ್ ಬಟನ್ ಸಾಧನದ ಮೂಲ ಬೆಲೆ ರೂ.3000ದಿಂದ 4000ರೊಳಗೆ ಇದ್ದು, ಪಕ್ಕದ ಕೇರಳ ರಾಜ್ಯದಲ್ಲಿ ಇದೇ ದರಕ್ಕೆ ಲಭ್ಯವಿದೆ. ಆದರೆ ರಾಜ್ಯದ ಸಾರಿಗೆ ಇಲಾಖೆ ಉಚ್ಚ ನ್ಯಾಯಾಲಯಕ್ಕೆ 8250ರವರೆಗೆ ಮಾರಾಟ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದು, ಈ ಯೋಜನೆಗಾಗಿ 12 ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ವಾಸ್ತವದಲ್ಲಿ ಈ ಕಂಪನಿಗಳು ಸಾಧನವನ್ನು 13,500ರಿಂದ 16,000ರವರೆಗೆ ಮಾರಾಟ ಮಾಡುತ್ತಿದ್ದು, ಯಾವುದೇ ಬಿಲ್ ನೀಡಲು ನಿರಾಕರಿಸುತ್ತಿವೆ ಎಂದು ಚಾಲಕರು ಆರೋಪಿಸಿದ್ದಾರೆ.

ಫಟ್ನೆಸ್ ಸರ್ಟಿಫಿಕೇಟ್ ಪಡೆಯಲು ಅನಿವಾರ್ಯವಾಗಿರುವುದರಿಂದ ಚಾಲಕರು ಸಾಲಮಾಡಿ ಸಾಧನ ಅಳವಡಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಈ ಪ್ಯಾನಿಕ್ ಬಟನ್ ಕಾರ್ಯಕ್ಷಮತೆಯ ಮೇಲೆಯೂ ಪ್ರಶ್ನೆಗಳು ಎದ್ದಿವೆ. ಅಪಾಯದ ಸಂದರ್ಭದಲ್ಲಿ ಬಟನ್ ಒತ್ತಿದರೂ, ಸಂದೇಶ ಕಂಟ್ರೋಲ್ ರೂಮ್‌ಗೆ ತಲುಪುತ್ತಿಲ್ಲ. ಸಂಬAಧಿತ ಕಂಟ್ರೋಲ್ ರೂಮ್ ವ್ಯವಸ್ಥೆಯೇ ಇಲ್ಲ ಎಂಬ ಆರೋಪ ಕೇಳಿಬಂದಿದೆ. ತುರ್ತು ಪ್ರತಿಕ್ರಿಯೆಗಾಗಿ ಕರೆ ಬರುತ್ತಿಲ್ಲವೆಂಬುದರಿAದ ಈ ಸಾಧನ “ಡಮ್ಮಿ” ಆಗಿದೆ ಎಂದು ಚಾಲಕರು ದೂರಿದ್ದಾರೆ.

ಇದರ ಜೊತೆಗೆ ಸಾಧನದ ವಾರ್ಷಿಕ ರೀಚಾರ್ಜ್ ಶುಲ್ಕಕ್ಕೂ ಭಾರಿ ವ್ಯತ್ಯಾಸವಿದೆ. ಸಾರಿಗೆ ಇಲಾಖೆ 1800 ಎಂದು ತಿಳಿಸಿದ್ದರೂ, ಕಂಪನಿಗಳು 3800ರವರೆಗೆ ವಸೂಲಿ ಮಾಡುತ್ತಿವೆ. ರೀಚಾರ್ಜ್ ಮಾಡದ ವಾಹನಗಳಿಗೆ ಎಫ್‌ಸಿ ನವೀಕರಣವನ್ನು ಆರ್‌ಟಿಸಿ ಅಧಿಕಾರಿಗಳು ತಡೆಹಿಡಿಯುತ್ತಿದ್ದಾರೆ ಎಂಬ ಆರೋಪವೂ ಇದೆ. ಈ ಹಿನ್ನಲೆಯಲ್ಲಿ ಸರ್ಕಾರ ಘೋಷಿಸಿದಂತೆ 1800 ರೀಚಾರ್ಜ್ ಶುಲ್ಕವನ್ನು ಮಾತ್ರ ವಸೂಲಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಟ್ಯಾಕ್ಸಿ ಚಾಲಕ-ಮಾಲಕರ ಪರವಾಗಿ ಸರ್ಕಾರ ಮತ್ತು ಸಾರಿಗೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಇನ್ನು ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಹರೀಶ್, ರಾಜೇಶ್, ಸುರೇಶ್ ಸಾಲಿಯಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

ಮನಸ್ಸು ಶಾಂತವಾಗಿದ್ದಾಗ ಮಾತ್ರ ಏಕಾಗ್ರತೆ ಸಾಧ್ಯ: ಡಾ. ಸರ್ಫ್ರಾಜ್ ಜೆ. ಹಾಸಿಮ್

August 14, 2026

ಮೂಡಾ ವ್ಯಾಪ್ತಿಯ ಕೊಟ್ಟಾರ ಆಸ್ತಿ ಖರೀದಿ ಪ್ರಕ್ರಿಯೆ: ಮೂಲ ದಾಖಲೆಗಳ ಕುರಿತು ಪ್ರಶ್ನೆಗಳ ಸರಮಾಲೆ

August 14, 2026

Comments are closed.

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಹಿದಾಯತ್ ನಗರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

By UllalaVaniAugust 15, 20260

ಕೋಟೆಕಾರ್: ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್, ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ, ಕೆಎಂಜೆ, ಎಸ್‌ವೈಎಸ್ ಹಾಗೂ…

ಮನಸ್ಸು ಶಾಂತವಾಗಿದ್ದಾಗ ಮಾತ್ರ ಏಕಾಗ್ರತೆ ಸಾಧ್ಯ: ಡಾ. ಸರ್ಫ್ರಾಜ್ ಜೆ. ಹಾಸಿಮ್

August 14, 2026

ಮೂಡಾ ವ್ಯಾಪ್ತಿಯ ಕೊಟ್ಟಾರ ಆಸ್ತಿ ಖರೀದಿ ಪ್ರಕ್ರಿಯೆ: ಮೂಲ ದಾಖಲೆಗಳ ಕುರಿತು ಪ್ರಶ್ನೆಗಳ ಸರಮಾಲೆ

August 14, 2026

ಉಳ್ಳಾಲವಾಣಿ ಲೋಗೋ ಉಪಯೋಗಿಸಿ ಸಂಸ್ಥೆಯ ಹೆಸರಿನಲ್ಲಿ ಎಡಿಟ್‌ ಮಾಡಿದ ಫೋಟೋ ಶೇರ್ — ಕಾನೂನು ಕ್ರಮದ ಎಚ್ಚರಿಕೆ

August 14, 2026
1 2 3 … 2,059 Next
Automatic YouTube Gallery

ಉಳ್ಳಾಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ | ನೇರ ಪ್ರಸಾರ | 2026 | ತೊಕ್ಕೊಟ್ಟು

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಉಳ್ಳಾಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ | ನೇರ ಪ್ರಸಾರ | 2026 | ತೊಕ್ಕೊಟ್ಟು
Now Playing
ಉಳ್ಳಾಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ | ನೇರ ಪ್ರಸಾರ | 2026 | ತೊಕ್ಕೊಟ್ಟು
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Now Playing
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version