ಕೋಟಿಪದವು ಗ್ರಾಮದ ಶ್ರೀರಾಮ ಭಜನಾ ಮಂದಿರ (ರಿ.) ಇದರ ವತಿಯಿಂದ ನಡೆಯುವ ಶ್ರೀ ರಾಮನವಮಿ ಉತ್ಸವದ ಅಂಗವಾಗಿ, ದಕ್ಷ ಯುವ ಬಳಗ (ರಿ.) ಗ್ರಾಮಚಾವಡಿ ಇವರ ಸಹಯೋಗದಲ್ಲಿ ವಿಶೇಷ ಸಮಾಜಸೇವೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾ.27 ರಾಮನವಮಿ ಹಬ್ಬದಂದು ಬೆಳಿಗ್ಗೆ 6.20 ಗಂಟೆಗೆ ಏಕಹ ಭಜನೆಯ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಈ ಸಂದರ್ಭದಲ್ಲಿ ಗ್ರಾಮದ ಅಶಕ್ತ ಮತ್ತು ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ನಡೆಯಲಿದ್ದು, ಭಜನಾ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ “ಕೀರ್ತನ ಸಂಪುಟ – ಜನಜನಿತ ಭಜನೆಗಳ ಉಪಯುಕ್ತ ಸಂಗ್ರಹ” ಎಂಬ ಪುಸ್ತಕವನ್ನು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು, ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಲಿದ್ದಾರೆ.
ಆದ್ದರಿಂದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಶ್ರೀರಾಮದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ವಿನಂತಿಸಿದ್ದಾರೆ.


