ಉಳ್ಳಾಲ : ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಳ್ಳಾಲ,ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲಿಯಾಸ್ ಜಲ್ದಿ ಅರ್ಫಾನ್ (29) ಬಂಧಿತ ಆರೋಪಿ.
ಜಲ್ದಿ ಅರ್ಫಾನ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೇ ಎಂಟು ಪ್ರಕರಣಗಳು ದಾಖಲಾಗಿದ್ದು,ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿ ಜಲ್ದಿ ಅರ್ಫಾನ್ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

