Site icon Ullalavani

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೈಕ್ ಅಡ್ಡಗಟ್ಟಿ ಭೀಕರ ಹತ್ಯೆ

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕಡಿದು ಹತ್ಯೆ ನಡೆಸಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ.

ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಫ್ಲೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಇವರ ಮೇಲೆ ಕೊಲೆಗೆ ಯತ್ನ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.ಪ್ರಸ್ತುತ ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Exit mobile version