ಇಂದು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ಲಭ್ಯವಾಗಿದೆ.

ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪತ್ತೆಯಾದ ಕಾರಿನ ಆಧಾರದ ಮೇಲೆ ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಟ್ಲ ಪೊಲೀಸರು ವಶಪಡಿಸಿಕೊಂಡ ಕಾರುನ್ನು ಹೆಚ್ಚಿನ ತನಿಖೆಗಾಗಿ ಮಂಗಳೂರು ಪೊಲೀಸರಿಗೆ ಹಸ್ತಾಂತರ.



