ಬೆಂಗಳೂರು : ಮಂಗಳೂರು ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಹೆಲ್ತ್ ಕೇರ್ ಕರ್ನಾಟಕ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಲಯನ್ ಅನಿಲ್ ದಾಸ್ ಅವರಿಗೆ ಸುವರ್ಣ ಕನ್ನಡಿಗ-2026′ ಪ್ರಶಸ್ತಿ ಲಭಿಸಿದೆ.

ಕನ್ನಡಪ್ರಭ- ಸುವರ್ಣ ನ್ಯೂಸ್ ವತಿಯಿಂದ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ನಡೆದ ಸಮಾರಂಭದಲ್ಲಿ ‘ಸುವರ್ಣ ಕನ್ನಡಿಗ-2026’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಲಯನ್ ಅನಿಲ್ ದಾಸ್ ಹಾಗೂ ಅವರ ಪತ್ನಿ ಆಶಾಲತಾ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಈ ಸಂದರ್ಭ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ಸಂಸದೀಯ ವ್ಯವಹಾರ, ಶಾಸನ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್, ಚಿತ್ರನಟ ಅನಿರುದ್ಧ ಜಟ್ಕರ್, ಕನ್ನಡಪ್ರಭ ಏಷಿಯಾನೆಟ್ ಸುವರ್ಣ ನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

