Site icon Ullalavani

ಕೊಣಾಜೆ ; ದೇವರಾಜ ಅರಸು ನಿಲಯದ `ರಜತ ಸಂಭ್ರಮ’

ಕೊಣಾಜೆ;ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ-2026 ಕಾರ್ಯಕ್ರಮ ವಿಜೃಂಭಣೆಯಿoದ ನಡೆಯಿತು.

ಚಿತ್ರನಟ, ಹಿರಿಯ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು, ಬೇರೆ ಬೇರೆ ಮನೆಯಿಂದ ಬಂದರೂ ಇಲ್ಲಿ ಒಂದೇ ಕುಟುಂಬದ ಸದಸ್ಯರಂತೆ ವಿದ್ಯಾರ್ಥಿಗಳು ಜೊತೆಯಾಗಿರುವುದು ವಿಶೇಷವಾದ ಅನುಭವವನ್ನು ನೀಡುತ್ತದೆ.ವಿದ್ಯಾ ಸಂಸ್ಥೆಗಳು ದೇವಸ್ಥಾನದಂತೆ ಶ್ರೇಷ್ಟ ಎಂದರು.

ಹಿAದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರದ್ಧೆಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧಿಸಲು ಸಾಧ್ಯವಿದೆ. ಏನನ್ನು ಯೋಚಿಸುತ್ತೇವೆಯೋ ಅದೇ ಆಗುತ್ತೇವೆ.ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಇರಲಿ ಎಂದು ಆಶಿಸಿದರು.

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಾಧವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಜೀವನ ನಡೆಸಿ ನಮ್ಮ ಗುರಿಯನ್ನು ಸಾಧಿಸ ಬೇಕೆಂದರು.

ಈ ಸಂದರ್ಭ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನಿಲಯ ಪಾಲಕಿ ಭವಾನಿ ಹಾಗೂ ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು. ರಜತ ಸಂಭ್ರಮದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ನಿಲಯದ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತ ಪಡಿಸಿದರು. ಅಸೈಗೋಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾಗರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಸಂಗಮೇಶ್, ಮಂಗಳೂರು ಹಾಪ್ ಕಾಮ್ಸ್ ನಿರ್ದೇಶಕ ರವಿ ಕುಮಾರ್ ಶೆಟ್ಟಿ, ರಾಯಿ ಶಾಲೆಯ ಶಿಕ್ಷಕ ಸಿದ್ದಪ್ಪ ದೊಡ್ಡ ಕರಿಯಪ್ಪ, ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಗೀತಾ ಕುಂದರ್, ಕೊಣಾಜೆ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದ ನಿಲಯ ಪಾಲಕಿ ಲಸ್ಸೀನಾ, ಪ್ರಮುಖರಾದ ಜಯಾನಂದ ಶೆಟ್ಟಿ ಕೊಣಾಜೆ, ವಿವಿಧ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಕೃಷ್ಣರಾಜ್, ರಾಧೇಶ್ ತೊರ್ಕೆ, ಪುಷ್ಪಲತಾ, ಶಶಿಕಲಾ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ನಿಲಯ ಪಾಲಕಿ ಭವಾನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 25 ವರ್ಷಗಳ ಅವಧಿಯಲ್ಲಿ ನಿಲಯ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ವಿದ್ಯಾರ್ಥಿನಿರಾದ ಮೋಕ್ಷ ವಂದಿಸಿ, ಭೂಮಿಕಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Exit mobile version