Site icon Ullalavani

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ನಾಲ್ವರು ವಿದ್ಯಾರ್ಥಿನಿ ಸಹಿತ ಒಟ್ಟು 7 ಮಂದಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ.

ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ.ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮಾರಿಪಳ್ಳ ಎಂಬಲ್ಲಿ ಡಿವೈಡರ್ ಮೇಲೆ ಹತ್ತಿ ಅಲ್ಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಂಬವು ಮುರಿದು ಬಿದ್ದಿದ್ದು, ಕಾರು ಪಲ್ಟಿಯಾಗಿದೆ.ಕಾರಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳಿದ್ದರು. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಪಲ್ಟಿಯಾಗಿದ್ದ ಕಾರನ್ನು ಎತ್ತಿ ಗಾಯಗೊಂಡವರನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ.ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version