Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು; ಡಾ. ತಿಮ್ಮಯ್ಯ

UllalaVaniBy UllalaVaniApril 2, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ದೇರಳಕಟ್ಟೆ; ಶಿಶು ಮರಣ ಪ್ರಮಾಣ ಹಾಗೂ ತಾಯಿ ಮರಣ ಪ್ರಮಾಣ ಕಡಿಮೆ ಇರುವ ಸಮಾಜವೇ ನಿಜವಾದ ಆರೋಗ್ಯವಂತ ಸಮಾಜ. ಗರ್ಭಿಣಿಯರ ಸಮರ್ಪಕ ಆರೈಕೆ, ಸರಿಯಾದ ಪೌಷ್ಠಿಕ ಆಹಾರ, ರಕ್ತಹೀನತೆ ಹಾಗೂ ಸೋಂಕುಗಳನ್ನು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅಭಿಪ್ರಾಯಪಟ್ಟರು.


ಅವರು ದೇರಳಕಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ಬುಧವಾರ ನಡೆದ “ಆಶಾ ಸಬಲೀಕರಣ : ಸುರಕ್ಷಿತ ತಾಯಂದಿರು, ಆರೋಗ್ಯವಾದ ಶಿಶುಗಳು” ಎಂಬ ಶೀರ್ಷಿಕೆಯ ಆಶಾ ಕಾರ್ಯಕರ್ತೆಯರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಗರ್ಭಧಾರಣೆಯ ಆರಂಭಿಕ ಹಂತದಲ್ಲೇ ನೋಂದಣಿ ಅತ್ಯಂತ ಅಗತ್ಯವಾಗಿದ್ದು, ಮೊದಲ 12 ವಾರಗಳೊಳಗೆ ನೋಂದಣಿ ಮಾಡಿಸಬೇಕು ಎಂಬ ನಿಯಮವಿತ್ತು ಆದರೆ ಈಗ 10 ವಾರಗಳೊಳಗೆ ನೋಂದಣಿ ಪ್ರಕ್ರಿಯೆ ಆಗಬೇಕು ಎಂಬ ನಿಯವಿದ್ದು ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.
ಗರ್ಭಿಣಿಯರಿಗೆ ಸರಿಯಾದ ಸಮಯದಲ್ಲಿ ಆರೋಗ್ಯ ತಪಾಸಣೆ, ಪೌಷ್ಠಿಕ ಆಹಾರ ಹಾಗೂ ಸೋಂಕುಗಳಿಗೆ ಚಿಕಿತ್ಸೆ ಪಡೆಯದಿದ್ದರೆ ಕಡಿಮೆ ತೂಕದ ಮಗು ಹಾಗೂ ಅವಧಿಗೆ ಮುನ್ನ ಹೆರಿಗೆ ಸಂಭವಿಸುವ ಸಾಧ್ಯತೆ ಹೆಚ್ಚುತ್ತದೆ. ಇದು ಶಿಶು ಮರಣಕ್ಕೆ ಪ್ರಮುಖ ಕಾರಣವಾಗುತ್ತದೆ ಎಂದು ತಿಳಿಸಿದರು.
ಸುಮಾರು 15 ಜಿಲ್ಲೆಗಳು ಹಾಗೂ ಅಂತರರಾಜ್ಯದ 2 ಜಿಲ್ಲೆಗಳಿಂದ ಜನರು ಮಂಗಳೂರಿಗೆ ವೈದ್ಯಕೀಯ ಸೌಲಭ್ಯಕ್ಕಾಗಿ ಬರುತ್ತಿದ್ದಾರೆ. ಗರ್ಭಿಣಿ ಹಾಗೂ ಶಿಶು ಆರೈಕೆಯ ಕುರಿತು ಇಲಾಖೆಯಿಂದ ಈಗಾಗಲೇ ಅನೇಕ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ .ಇಂತಹ ಮಹತ್ವದ ವಿಷಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಿರುವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಅಭಿನಂದನೆ ಸಲ್ಲಿಸಿದರು.

ಕ್ಷೇಮ ಡೀನ್ ಡಾ. ಸಂದೀಪ್ ರೈ ಮಾತನಾಡಿ ಸ್ತ್ರೀರೋಗ ಹಾಗೂ ಮಕ್ಕಳ ವಿಭಾಗಕ್ಕೆ ಬರುವ ರೋಗಿಗಳಿಗೆ ಅಗತ್ಯವಾದ ಚಿಕಿತ್ಸೆ ಹಾಗೂ ಆರೋಗ್ಯ ಮಾಹಿತಿಯನ್ನು ನಾವು ನಿರಂತರವಾಗಿ ನೀಡುತ್ತಾ ಇದ್ದೇವೆ. ಕೋವಿಡ್ ಸಮಯದಲ್ಲಿ ಆಶಾ ಕಾರ್ಯಕರ್ತೆಯರೊಂದಿಗೆ ಕೈಜೋಡಿಸಿ ನಾವು ಬಹಳಷ್ಟು ಸೇವೆ ಸಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ಜಿಲ್ಲಾಧಿಕಾರಿಗಳ ಸಹಕಾರದಿಂದ ಕೋವಿಡ್ ರೋಗಿಗೆ ಚಿಕಿತ್ಸೆ ನೀಡಿದ ಮೊದಲ ಆಸ್ಪತ್ರೆಯಾಗಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ಗುರುತಿಸಿಕೊಂಡಿತು.ಆ ಸಮಯದಲ್ಲಿ ಎಲ್ಲೂ ಸಾಧ್ಯವಾಗದ ಚಿಕಿತ್ಸೆಯನ್ನು ನಾವು ಇಲ್ಲಿ ಯಶಸ್ವಿಯಾಗಿ ನೀಡಿದ್ದೇವೆ. ಆದ ಕಾರಣದಿಂದ ಬೇರೆ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ನಮ್ಮ ಆಸ್ಪತ್ರೆಗೆ ಬರುತ್ತಿದ್ದರು. ಆ ಸಮಯದಲ್ಲಿ ಮಾತ್ರವಲ್ಲದೆ ಇಂದಿಗೂ ಕೂಡ ವಿವಿಧ ಜಿಲ್ಲೆಗಳಿಂದ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರು ಕೂಡ ಬೇರೆ ಜಿಲ್ಲೆಗಳಿಂದ ಇಲ್ಲಿ ಆಗಮಿಸುತ್ತಿದ್ದರು. ಸಾಮಾನ್ಯವಾಗಿ ಆಶಾ ಕಾರ್ಯಕರ್ತೆಯರನ್ನು ನಾವು ನೇರವಾಗಿ ನೋಡಲು ಅವಕಾಶ ಕಡಿಮೆ ಸಿಗುತ್ತದೆ. ಆದರೆ ನೀವು ಜನರ ನಡುವೆ ಸದಾ ಕೆಲಸ ಮಾಡುತ್ತಿರುವವರು. ಆದ್ದರಿಂದ ಆಶಾ ಕಾರ್ಯಕರ್ತೆಯರು ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.ನಮ್ಮ ಆಸ್ಪತ್ರೆಯಿಂದ ಅಗತ್ಯವಿರುವ ಎಲ್ಲ ರೀತಿಯ ಸಹಾಯ ಹಾಗೂ ಚಿಕಿತ್ಸಾ ಸೇವೆಗಳನ್ನು ನೀಡಲು ನಾವು ಸದಾ ಸಿದ್ಧರಾಗಿದ್ದೇವೆ. ಎಂದರು.

ಕ್ಷೇಮ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುಮಲತಾ. ಆರ್ ಶೆಟ್ಟಿ,ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಶೆಟ್ಟಿ, ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಸೀಮಾ ಪವಾಮನ್ ಎಸ್., ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಧೃತಿಮಾನ್ ಶೆಟ್ಟಿ ಉಪಸ್ಥಿತರಿದ್ದರು.

ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ರಾಹುಲ್ ಹೆಗ್ಡೆ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಮೆಡಿಕೋ ಸಾಮಾಜಿಕ ಕಾರ್ಯಕರ್ತ ರಾಜಾರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಮೆಡಿಕೋ ಸಾಮಾಜಿಕ ಕಾರ್ಯಕರ್ತ ರವಿ ಕೆ. ವಂದಿಸಿದರು.

ಮಂಚಿ, ನಾಟೇಕಲ್, ಪುದು ಅಂಬ್ಲಮೊಗರು, ಕುರ್ನಾಡು ಹಾಗೂ ಬೊಳಿಯಾರು ಪ್ರದೇಶಗಳ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಸೂತಿ ಹಾಗೂ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಶೆಟ್ಟಿತಾಯಿ ಆರೈಕೆ / ಗರ್ಭಿಣಿ ತಾಯಿ ಆರೈಕೆಯ ಬಗ್ಗೆ ಹಾಗೂ ನವಜಾತ ಶಿಶು ಆರೈಕೆಯ ಬಗ್ಗೆ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಸೀಮಾ ಪವಾಮನ್ ಎಸ್ ಮತ್ತು ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಧೃತಿಮಾನ್ ಶೆಟ್ಟಿ ಮಾಹಿತಿಯನ್ನು ನೀಡಿದರು.

2025ರ ಏಪ್ರಿಲ್‌ನಿಂದ ನಿನ್ನೆವರೆಗೆ ಶಿಶು ಮರಣ ಪ್ರಮಾಣದ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15 ಶಿಶು ಮರಣ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 6 ಪ್ರಕರಣಗಳು ನಮ್ಮ ಜಿಲ್ಲೆಗೆ ಸಂಬಂಧಿಸಿದರೆ, ಉಳಿದವು ಬೇರೆ ಜಿಲ್ಲೆಗಳಿಗೆ ಸೇರಿದವು. ಅವುಗಳಲ್ಲಿ 3 ಪ್ರಕರಣಗಳು ಕಾಸರಗೋಡು ಪ್ರದೇಶಕ್ಕೆ ಸೇರಿವೆ. ಅಪೌಷ್ಟಿಕತೆ, ಗರ್ಭಾವಸ್ಥೆಯಲ್ಲಿನ ರಕ್ತಹೀನತೆ ಹಾಗೂ ಜನನಾಂಗ ಮಾರ್ಗದ ಸೋಂಕುಗಳು ಶಿಶು ಮರಣಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಮೂರು ಅಂಶಗಳನ್ನು ಸರಿಯಾದ ರೀತಿಯಲ್ಲಿ ತಡೆಗಟ್ಟುವ ಮೂಲಕ ಶಿಶು ಮರಣವನ್ನು ಕಡಿಮೆ ಮಾಡಬಹುದು
ಡಾ. ತಿಮ್ಮಯ್ಯ
ಜಿಲ್ಲಾ ಆರೋಗ್ಯಾಧಿಕಾರಿ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸರ್ಕಾರಿ ಆರೋಗ್ಯ ವ್ಯವಸ್ಥೆ ಖಾಸಗಿ ದಾನಧರ್ಮದ ಅವಲಂಬಿತವೇ? ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಪ್ರಶ್ನೆಗಳು

June 9, 2026

ಬ್ಲಾಕ್‌ಮೇಲ್ ಪ್ರಕರಣ: ನಿಝಾಮ್ ಯುವ ಕಾಂಗ್ರೆಸ್ ಹುದ್ದೆಯಿಂದ ಅಮಾನತು

June 9, 2026

ಮಂಜನಾಡಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಹೊಸ ತಿರುವು: ತನಿಖೆಗೆ ಪೊಲೀಸ್ ಆಯುಕ್ತರ ಆದೇಶ – ಕೋಣಾಜೆ ಪೊಲೀಸರು ಆಯುಕ್ತರ ಜ್ಞಾಪನ ಪತ್ರದ ಆದೇಶ ಪಾಲಿಸುತ್ತಾರೋ?

June 9, 2026

Comments are closed.

Advertise
ಸಂಪರ್ಕಿಸಿ

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026
All News

ವಿಷಯ ಜ್ಞಾನ ವಿದ್ದು ಉತ್ತಮ ಭೋದನೆ ಮಾಡುವವರು ಉತ್ತಮ ಶಿಕ್ಷಕರು : ರವೀಂದ್ರ ರೈ ಕಳ್ಳಿಮಾರ್

By UllalaVaniJune 9, 20260

ಹರೇಕಳ : ವಿಷಯ ಜ್ಞಾನವಿದ್ದು ಒಳ್ಳೆಯ ಬೋಧನೆಯೊಂದಿಗೆ ಮಕ್ಕಳ ಮನಸ್ಸನ್ನು ಗೆಲ್ಲುವ ಶಿಕ್ಷಕರು ಅತ್ಯುತ್ತಮ ಶಿಕ್ಷಕರಾಗುತ್ತಾರೆ. ಶಿಕ್ಷಕರು ಸಚ್ಚಾರಿತ್ಯವಂತರು ಸಂಸ್ಕಾರವಂತರು…

ಮಂಗಳೂರು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಜಿಲ್ಲಾ ನೋಟರಿ ವಕೀಲರಾದ ಪ್ರವೀಣ್‌ ಕುಮಾರ್‌ ಅದ್ಯಪಾಡಿ ಜಯ

June 9, 2026

ಸರ್ಕಾರಿ ಆರೋಗ್ಯ ವ್ಯವಸ್ಥೆ ಖಾಸಗಿ ದಾನಧರ್ಮದ ಅವಲಂಬಿತವೇ? ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಪ್ರಶ್ನೆಗಳು

June 9, 2026

ಬ್ಲಾಕ್‌ಮೇಲ್ ಪ್ರಕರಣ: ನಿಝಾಮ್ ಯುವ ಕಾಂಗ್ರೆಸ್ ಹುದ್ದೆಯಿಂದ ಅಮಾನತು

June 9, 2026
1 2 3 … 1,957 Next
Automatic YouTube Gallery

ಕೊಣಾಜೆ: ಮುಡಾ ಅಕ್ರಮ ಪ್ರಕರಣ; ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ;ಕೊಣಾಜೆ ಮೂಡಾ ಲೇಔಟ್ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ಶಂಕೆ

ಸಾರ್ವಜನಿಕರ ಹಣ ದುರ್ಬಳಕೆ ಆರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆ: ಮುಡಾ ಅಕ್ರಮ ಪ್ರಕರಣ; ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ
Now Playing
ಕೊಣಾಜೆ: ಮುಡಾ ಅಕ್ರಮ ಪ್ರಕರಣ; ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ;ಕೊಣಾಜೆ ಮೂಡಾ ಲೇಔಟ್ ...
ಅಕ್ಬರ್ ಅಖ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ;ಕೊಣಾಜೆ ಮೂಡಾ ಲೇಔಟ್ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ಶಂಕೆ

ಸಾರ್ವಜನಿಕರ ಹಣ ದುರ್ಬಳಕೆ ಆರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಜೂನ್ 22ರವರೆಗೆ ಕೋಟೆಕಾರ್ ಬೀರಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
Now Playing
ಜೂನ್ 22ರವರೆಗೆ ಕೋಟೆಕಾರ್ ಬೀರಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಕೋಟೆಕಾರ್ ಬೀರಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ; ಜೂನ್ 22ರವರೆಗೆ ...
ಕೋಟೆಕಾರ್ ಬೀರಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ; ಜೂನ್ 22ರವರೆಗೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಆರೋಗ್ಯ ಶಿಬಿರ

ಮಧುಮೇಹ, ಸಂಧಿವಾತ ಸೇರಿ ಹಲವು ಕಾಯಿಲೆಗಳಿಗೆ ಉಚಿತ ಚಿಕಿತ್ಸೆ


📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version