ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಎಂಬಾತನನ್ನು ಬಂಧಿಸಲಾಗಿದೆ.
ಕೊಣಾಜೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯನ್ವಯ ಆರೋಪಿಯನ್ನು ಬಂಧಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್. ಐ ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
