ಕೊಣಾಜೆ; ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ತಲೆಗೆ ಗಂಭೀರವಾದ ಗಾಯವಾಗಿದ್ದು ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಟ್ ಆಂಡ್ ರನ್; ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಪರಿಸರ ನಿವಾಸಿಗಳು ಆಕ್ರೋಶಗೊಂಡಿದ್ದರು. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
