ಮಂಗಳೂರು ;ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯು ಸಹಯೋಗದೊಂದಿಗೆ ಎ.14ರಂದು ಉಳ್ಳಾಲ ತಾಲೂಕಿನ ಮುಡಿಪು ಎಸ್.ಕೆ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್.ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮುಡಿಪು ಎಸ್.ಕೆ.ಸಭಾಂಗಣದಲ್ಲಿ ನಡೆಯಿತು. ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು, ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲು ತೀರ್ಮಾನಿಸಲಾಯಿತು.

ಸಮ್ಮೇಳನದ ಯಶಸ್ಸಿಗೆ ಸಹಕರಿಸಲು ಸುಮಾರು 200ಮಂದಿ ಸದಸ್ಯರನ್ನೊಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಹಮೀದ್ ಹಸನ್ ಮಾಡೂರು, ಬ್ಯಾರಿ ಅಕಾಡೆಮಿಯ ಸದಸ್ಯ ಶರೀಫ್ ಭಾರತ್ ಬಾಳಿಲು ಉಪಸ್ಥಿತರಿದ್ದರು.
ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಎಸ್.ಕೆ ಅಬ್ದುಲ್ ಖಾದರ್ ಹಾಜಿ, ಗೌರವ ಸಲಹೆಗಾರರಾಗಿ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಕಣಚೂರು ಮೋನು, ಹೈದರ್ ಪರ್ತಿಪ್ಪಾಡಿ, ಅಬ್ದುಲ್ ಅಝೀಝ್, ಹಾಜಿ ಬಿ.ಜಿ, ಹನೀಫ್ ಉಳ್ಳಾಲ, ಹಾಜಿ ಅಬ್ದುಲ್ ರಶೀದ್ ಉಳ್ಳಾಲ, ಹಾಜಿ ಟಿ.ಎಸ್. ಅಬ್ದುಲ್ಲಾ ಸಾಮಣಿಗೆ, ಅಧ್ಯಕ್ಷರಾಗಿ ವಿ.ಇಬ್ರಾಹಿಂ ನಡುಪದವು, ಪ್ರದಾನ ಕಾರ್ಯದರ್ಶಿಯಾಗಿ ಹಂಝ ಮಲಾರ್, ಸಂಚಾಲಕರಾಗಿ ಹಮೀದ್ ಹಸನ್ ಮಾಡೂರು, ಸಹ ಸಂಚಾಲಕರಾಗಿ ರಿಯಾಝ್, ಮಹಿಳಾ ಘಟಕದ ಸಂಚಾಲಕರಾಗಿ ಸಿಹಾನ ಬಿ.ಎಂ.ಅವರನ್ನು ಆಯ್ಕೆ ಮಾಡಲಾಗಿದೆ.
ಸಮ್ಮೇಳನದ ಯಶಸ್ವಿಗಾಗಿ ಸಹಕರಿಸಲು ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಸಂಚಾಲಕರನ್ನು ನೇಮಿಸಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.


