ಉಳ್ಳಾಲ: ನಡುಪದವು ಕಾಲೇಜು ಗೇಟ್ ಬಳಿ ಇತ್ತಂಡ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿ ಪ್ರಕರಣದ ವಿಡಿಯೋ ವೈರಲ್ ಆಗುತ್ತಿದ್ದಂತೆ ಐವರು ಗುರುತಿಸಿದ ಹಾಗೂ ಇತರೆ ವಿದ್ಯಾರ್ಥಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಸಮವಸ್ತ್ರ ಧರಿಸಿದ ಸುಮಾರು10-15 ವಿದ್ಯಾರ್ಥಿಗಳು ಪರಸ್ಪರ ಅವಾಚ್ಯ ಶಬ್ದಗಳಿಂದ ಜಬೈದು ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡಿದ್ದಾರೆ. ಈ ಕುರಿತು ಮೊಬೈಲ್ ನಲ್ಲಿ ದೃಶ್ಯ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಮಾ.೩೦ ರಂದು ನಡೆದ ಪ್ರಕರಣದ ವಿಡಿಯೋ ಎ.೩ ರಂದು ವೈರಲ್ ಆಗುತ್ತಿದ್ದಂತೆ ವಿಡಿಯೋದಲ್ಲಿ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕ ಹಿತಾಸಕ್ತಿ ಅನುಸಾರ ಸ್ಥಳೀಯರು ಕಾಲೇಜು ಕ್ಯಾಂಪಸ್ಸಿನಲ್ಲಿ ನಡೆಯುವ ಗಲಾಟೆಗಳನ್ನು ತಡೆದು, ಗ್ರಾಮದ ಗೌರವ ಕಾಪಾಡುವಂತೆ ಬರಹವನ್ನು ಹರಿಯಬಿಟ್ಟಿದ್ದರು. ಬಿಎನ್ ಎಸ್ ಆಕ್ಟ್ ನಡಿ ಪ್ರಕರಣ ದಾಖಲಾಗಿದೆ.