Site icon Ullalavani

ಮಹಿಳೆಯರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಧನ: ಅಗತ್ಯ ಕ್ರಮಕ್ಕೆ ದ.ಕ. ಡಿಸಿ ಸೂಚನೆ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು ಸಹಕರಿಸಬೇಕು. ಅವರಿಗೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬAಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚಿಸಿದ್ದಾರೆ.


ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಆಯ್ಕೆ ಹಾಗೂ ಸಮನ್ವಯ ಸುತಿ ಸಭೆ ಹಾಗು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧನಶ್ರೀ ಯೋಜನೆಯಡಿ ಎಚ್.ಐ.ವಿ ಸೋಂಕಿತ ಮಹಿಳೆಯರಿಗೆ ಹಾಗೂ ಚೇತನ ಯೋಜನೆಯಡಿ ದಮನಿತ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಧನ ಪಾವತಿಗೆ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳಿಗೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಅಥವಾ ಇನ್ನಿತರೆ ದಾಖಲೆಗಳ ಸಮಸ್ಯೆಯಾದಲ್ಲಿ ಅದನ್ನು ಪರಿಹರಿಸುವಂತೆ ಕ್ರಮವಹಿಸಬೇಕು ಎಂದು ಡಿ.ಸಿ ಹೇಳಿದರು.

15ಮಂದಿ ನಿವೇಶನ ರಹಿತ ಟ್ರಾನ್ಸ್ ಜೆಂಡರ್ಸ್ ಪಟ್ಟಿಯನ್ನು ಮಂಗಳೂರು ಮಹಾನಗರಪಾಲಿಕೆಗೆ ಒದಗಿಸಲಾಗಿದೆ. ಗೃಹಲಕ್ಷಿö್ಮÃ ಯೋಜನೆಯಡಿ ನೋಂದಾಯಿಸಿದ 45 ಮಂದಿ ಟ್ರಾನ್ಸ್ಜೆಂಡರ್ಸ್ಗೆ ತಿಂಗಳಿಗೆ 2,000 ರೂ.ಮೊತ್ತವನ್ನು ನೀಡಲಾಗುತ್ತಿದೆ. ಇತ್ತೀಚಿಗೆ ನಡೆದ ಸರ್ವೇಯಂತೆ ದ.ಕ.ಜಿಲ್ಲೆಯಲ್ಲಿ ಒಟ್ಟು 96 ಟ್ರಾನ್ಸ್ಜೆಂಡರ್ಸ್ ವ್ಯಕ್ತಿಗಳು ನೋಂದಾಯಿಸಿರುತ್ತಾರೆ. ಟ್ರಾನ್ಸ್ಜೆಂಡರ್ ಪುರ್ನವಸತಿ ಯೋಜನೆಯಡಿ 18ರಿಂದ 60ರ ವಯೋಮಿತಿ ವ್ಯಕ್ತಿಗಳು ಸ್ವ-ಉದ್ಯೋಗ ಕೈಗೊಳ್ಳಲು 30 ಸಾವಿರ ರೂ ಪ್ರೋತ್ಸಾಹಧನ ನೀಡಲಾಗುತ್ತದೆ. ಟ್ರಾನ್ಸ್ ಜೆಂಡರ್ಸ್ ಪುನರ್ವಸತಿ ಯೋಜನೆಯಡಿ 16 ಅರ್ಜಿಗಳು ಸ್ವೀಕೃತವಾಗಿದ್ದು, 1 ಅರ್ಜಿಯು ಯಾವುದೇ ದಾಖಲೆಗಳು ಇಲ್ಲದೆ ತಿರಸ್ಕೃತಗೊಂಡಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಸಭೆಗೆ ಮಾಹಿತಿ ನೀಡಿದರು.

ದ.ಕ.ಜಿಲ್ಲಾ ಮಟ್ಟದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆಯ ಬಗ್ಗೆ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. 10 ಅಥವಾ 10ಕ್ಕಿಂತ ಹೆಚ್ಚು ಸಿಬ್ಬಂದಿ ವರ್ಗ ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಆಂತರಿಕ ದೂರುಗಳ ಸಮಿತಿ ರಚಿಸಿ ಜಿಲ್ಲಾ ಮಟ್ಟದಲ್ಲಿ ಆಂತರಿಕ ಮತ್ತು ಸ್ಥಳೀಯ ದೂರು ಸಮಿತಿಯ ವಿಚಾರಣಾ ವರದಿಯಂತೆ ನಿಯಮಾನುಸಾರ ಕ್ರಮ ವಹಿಸಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆಯನ್ನು ಸಮಗ್ರವಾಗಿ ಅನುಷ್ಥಾನ ಮಾಡಬೇಕು. ಬಾಕ್ಸ್ ಪೋರ್ಟಲ್‌ನಲ್ಲಿ ನಿಖರವಾಗಿ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ, ಅಪರ ಜಿಲ್ಲಾಧಿಕಾರಿ ರಾಜು ಕೆ, ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ ಹಾಗು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version