Site icon Ullalavani

ಉಳ್ಳಾಲ; ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ; ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

ಉಳ್ಳಾಲ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.


ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ ಎಲ್ಲಾ 90 ವಿದ್ಯಾರ್ಥಿಗಳು ಯಶಸ್ವಿಯಾಗಿ ತೇರ್ಗಡೆಯಾಗಿ 100% ಫಲಿತಾಂಶ ಸಾಧಿಸಿದ್ದಾರೆ.

ವಿದ್ಯಾರ್ಥಿನಿ ಹಂಡಾಫಿಬಿಯಾAಗ್ ಸುಚೆನ್ ಅವರು 580 (97%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸಾನಿಯಾ ತಾಜ್ ಹಾಗೂ ಆಸಿಯಾ ಶಮ್ನಾ ಅವರು ತಲಾ 555 (93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿ. ಫಾತಿಮಾ ಅಫ್ರ ಅವರು 549 (92%) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 66 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದಾರ್ಥಿನಿ ಫಾತಿಮಾ ನಿಧಾ ಅವರು 542 (90%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ . ಖದೀಜಾ ಅನ್ಹಾರ್ ಅವರು 541 (90%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಒಟ್ಟಾರೆ ಕಾಲೇಜು 98% ಫಲಿತಾಂಶ ದಾಖಲಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

Exit mobile version