Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಭರತನಾಟ್ಯ ಲೋಕಕ್ಕೆ ಆಘಾತ: ಶ್ರಾವಣ್ ಉಳ್ಳಾಲ್ ಇನ್ನಿಲ್ಲ

UllalaVaniBy UllalaVaniApril 11, 2026Updated:April 11, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ:ಎ-11 ಭರತನಾಟ್ಯವನ್ನು ಉಳಿಸಿ ಬೆಳೆಸಲು ಅಪಾರ ಸೇವೆ ಸಲ್ಲಿಸಿದ್ದ ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು ಉಳ್ಳಾಲ ಬಂಡಿಕೊಟ್ಯ ನಿವಾಸಿ ವಿದ್ವಾನ್ ಶ್ರಾವಣ್ ಉಳ್ಳಾಲ ಅವರು ಶುಕ್ರವಾರದಂದು ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತ ಶ್ರಾವಣ್ ಅವರು ಕಳೆದ ಮೂರು ತಿಂಗಳುಗಳಿಂದ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದು, ಕಳೆದ ವಾರ ಅವರ ಆರೋಗ್ಯದಲ್ಲಿ ತೀವ್ರ ಏರು ಪೇರು ಕಂಡು ಬಂದ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ ಶಿಕ್ಷಣವನ್ನು ಕಲಿಸಿದ್ದರು. ನೃತ್ಯದ ಜೊತೆಗೆ ಶಾರೀರಿಕ, ಬೌದ್ಧಿಕ, ಮಾನಸಿಕ, ನೈತಿಕ ಹಾಗೂ ಶೈಕ್ಷಣಿಕ ಮೌಲ್ಯಗಳ ಅರಿವು ಮೂಡಿಸುವ ಕಾರ್ಯದಲ್ಲಿ ಗುರುಕುಲವನ್ನು ಮುಂಚೂಣಿಗೆ ತಂದಿದ್ದರು.
ಪಂದನಲ್ಲೂರು ಶೈಲಿಯ ಭರತನಾಟ್ಯವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಪರಿಚಯಿಸಿ ಒರಿಸ್ಸಾ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ಗುಜರಾತ್ ಸೇರಿದಂತೆ ಅನೇಕ ರಾಜ್ಯಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದರು. ದುಬೈ ಸೇರಿದಂತೆ ವಿದೇಶಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್, ಒಡಿಸ್ಸಿ ಹಾಗೂ ಯಕ್ಷಗಾನಗಳ ಸಮ್ಮಿಲನ ಪ್ರದರ್ಶನ ನೀಡಿ ಭಾರತವನ್ನು ಅವರು ಪ್ರತಿನಿಧಿಸಿದ್ದರು. ‘ಮೋಕ್ಷಂ’, ‘ರುದ್ರ ವೀರಭದ್ರ’, ‘ಶ್ರೀ ಕೃಷ್ಣ ಲೀಲಾಮೃತಂ’, ‘ತ್ರಿಶಕ್ತಿ’, ‘ನೃಸಿಂಹ ಚಲತಂ’, ‘ದಶ ಹಲರೂಪಂ’, ‘ಶಕ್ತಿ’ ಮೊದಲಾದ ನೃತ್ಯ ರೂಪಕಗಳ ಮೂಲಕ ಅಪಾರ ಜನಮನ್ನಣೆ ಪಡೆದಿದ್ದರು.
ದೂರದರ್ಶನ ಗ್ರೇಡೆಡ್ ಕಲಾವಿದರಾಗಿದ್ದ ಶ್ರಾವಣ್ ಉಳ್ಳಾಲರು ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು,ವೀಣಾ ವಾದನದಲ್ಲೂ ಪರಿಣತಿ ಹೊಂದಿದ್ದರು. ಗುರುಕುಲ ಉತ್ಸವಗಳ ಮೂಲಕ ದೇಶ-ವಿದೇಶಗಳ ಕಲಾವಿದರನ್ನು ಒಟ್ಟುಗೂಡಿಸಿ ನೃತ್ಯ ಪರಂಪರೆಯನ್ನು ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ನಾಟ್ಯ ಪ್ರವೀಣ ಪ್ರಶಸ್ತಿ, ಜನಪದ ಬಂಧು ಪ್ರಶಸ್ತಿ, ನೃತ್ಯ ಶಿರೋಮಣಿ ಪ್ರಶಸ್ತಿ, ನೃತ್ಯ ಪ್ರಿಯ ಪ್ರಶಸ್ತಿ, ದುರ್ಗಾ ರತ್ನ ಪುರಸ್ಕಾರ, ಗಿರ್ನಾರ್ ರತ್ನ ಪುರಸ್ಕಾರ, ಲಾಸ್ಯ ನೃತ್ಯ ನಟೇಶ ಪುರಸ್ಕಾರ (ಪದ್ಮಭೂಷಣ ನಾಟ್ಯಾಚಾರ್ಯ ಶ್ರೀ ಧನಂಜಯ್ ಅವರಿಂದ), ದಕ್ಷಿಣ ಕನ್ನಡ ಜಿಲ್ಲಾಡಳಿತದ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಅವರಿಗೆ ಲಭಿಸಿದ ಪ್ರಮುಖ ಪ್ರಶಸ್ತಿಗಳಾಗಿವೆ.
ಶ್ರಾವಣ್ ಉಳ್ಳಾಲರ ಅಕಾಲಿಕ ನಿಧನಕ್ಕೆ ಕಲಾವಿದರು, ಶಿಷ್ಯರು ಹಾಗೂ ನೃತ್ಯಾಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತ ಶ್ರಾವಣ್ ಅವರು ಪತ್ನಿ ಶೈನಾ ಶ್ರಾವಣ್ ಮತ್ತು ಪುಟ್ಟ ಹೆಣ್ಣು ಮಗಳು ಮಂತ್ರ ಎಸ್ ಉಳ್ಳಾಲ್ ಅವರನ್ನ ಅಗಲಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕುರ್ನಾಡು ಗ್ರಾಮಪಂಚಾಯತ್ ನಿರ್ಲಕ್ಷ್ಯ : ಮುಡಿಪು ಕಾಲೇಜು ದ್ವಾರ ಬಳಿ ಕಸದ ರಾಶಿ, ವಿದ್ಯಾರ್ಥಿಗಳಿಗೆ ನರಕ ಯಾತನೆ

May 23, 2026

ನೇತ್ರಾವತಿ–ಫಲ್ಗುಣಿ ನದಿ ತೀರದ ಕರಾವಳಿ ವಲಯ CRZ ನಿಯಮದ ಉಲ್ಲಂಘನೆ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ NECF ಆಗ್ರಹ

May 21, 2026

ಆರೋಗ್ಯ ಸೇವೆ ದಾನವಲ್ಲ, ಸಂವಿಧಾನಬದ್ಧ ಹಕ್ಕು ಸುಪ್ರೀಂ ಕೋರ್ಟ್ ಆದೇಶದ ಬಳಿಕ ದ.ಕ ಜಿಲ್ಲೆಯಲ್ಲಿ ಹೆಚ್ಚಿದ ಸಾರ್ವಜನಿಕ ಕುತೂಹಲ

May 21, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಕುರ್ನಾಡು ದತ್ತಾತ್ರೇಯ ಶಾಲೆ ಹಳೆ ವಿದ್ಯಾರ್ಥಿಗಳ ಮಹಾಸಂಗಮ

By UllalaVaniMay 25, 20260

ಕೊಣಾಜೆ: ತಾಲೂಕಿನ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿಗಳ ಮಹಾಸಂಗಮ ಕಾರ್ಯಕ್ರಮ ನಡೆಯಿತು. ಸಾಂಪ್ರದಾಯಿಕವಾಗಿ ದೀಪ…

ಗಡಿ ಪ್ರದೇಶದ ಹೆಮ್ಮೆಯ ಪುತ್ರ ಹಮೀದ್ ಪಾವಳ – ರಾಜ್ಯೋತ್ಸವ ಪ್ರಶಸ್ತಿಗೆ ಯಾಕಿಲ್ಲ ಮಾನ್ಯತೆ?

May 25, 2026

ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ…..!!

May 25, 2026

ಕಲ್ಲಾಪು ಬುರ್ದುಗೋಳಿ ಸಾನಿಧ್ಯಕ್ಕೆ ನೂತನ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ದೇಣಿಗೆ

May 25, 2026
1 2 3 … 1,934 Next
Automatic YouTube Gallery

ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ನಾಟೆಕಲ್ ತಿಪ್ಪೆಪದವು ಅಲ್ ಮದಿನಾ ಕಮ್ಯುನಿಟಿ ಹಾಲ್‌ನಲ್ಲಿ ಕಾರ್ಯಕ್ರಮ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
Now Playing
ಕಾರ್ಮಿಕರಿಗೆ ಸರಕಾರ ನೀಡುವ ಸೌಲಭ್ಯಗಳ ಪ್ರಯೋಜನ ಪಡೆಯಲು ಸ್ಪೀಕರ್ ಯು.ಟಿ. ಖಾದರ್ ಕರೆ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ...
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ;ಹಿರಿಯ ಅಸಂಘಟಿತ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

ನಾಟೆಕಲ್ ತಿಪ್ಪೆಪದವು ಅಲ್ ಮದಿನಾ ಕಮ್ಯುನಿಟಿ ಹಾಲ್‌ನಲ್ಲಿ ಕಾರ್ಯಕ್ರಮ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು
Now Playing
ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು
ತೊಕ್ಕೊಟ್ಟುವಿನಲ್ಲಿ ನಡೆದ ಬ್ರಹ್ಮಶ್ರೀ ಬಿಲ್ಲವ ವೇದಿಕೆ, ಮಹಿಳಾ ವೇದಿಕೆ ಉಳ್ಳಾಲ ...
ತೊಕ್ಕೊಟ್ಟುವಿನಲ್ಲಿ ನಡೆದ ಬ್ರಹ್ಮಶ್ರೀ ಬಿಲ್ಲವ ವೇದಿಕೆ, ಮಹಿಳಾ ವೇದಿಕೆ ಉಳ್ಳಾಲ ತಾಲೂಕು ಇದರ ವಿದ್ಯಾರ್ಥಿಗಳ ದತ್ತು ಸ್ವೀಕಾರ ಸಮಾರಂಭ; ಬ್ರಹ್ಮಶ್ರೀ ಪ್ರಶಸ್ತಿ-2026 ಪ್ರದಾನ

ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version