ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದ್ದು, ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಇಂದು ಸಂಜೆ ಅಥವಾ ರಾತ್ರಿಯ ವೇಳೆ ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ 30% ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

