Site icon Ullalavani

ಫಳ್ನೀರ್‌ನ ಕಾರು ಆಲ್ಟ್ರೇಷನ್ ಸೆಂಟರ್‌ನಲ್ಲಿ ಭೀಕರ ಬೆಂಕಿ- ಮೂರು ಕಾರುಗಳು ಭಸ್ಮ……!

ಮಂಗಳೂರು, ಏ. 13: ನಗರದ ಫಳ್ನೀರ್‌ನಲ್ಲಿರುವ ಕಾರು ಆಲ್ಟ್ರೇಷನ್ ಸೆಂಟರ್ ಒಂದರಲ್ಲಿ ಸೋಮವಾರ ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ.

ಆಲ್ಟ್ರೇಷನ್ ಕೆಲಸಕ್ಕಾಗಿ ಅಂಗಡಿಯ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಆಹುತಿಯಾಗಿವೆ. ಇದರೊಂದಿಗೆ ಅಂಗಡಿಯಲ್ಲಿದ್ದ ಬೆಲೆಬಾಳುವ ಉಪಕರಣಗಳು ಮತ್ತು ಬಿಡಿಭಾಗಗಳು ಕೂಡ ಸುಟ್ಟು ಭಸ್ಮವಾಗಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಂಗಡಿಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.ಘಟನೆ ನಡೆದ ಸಮಯದಲ್ಲಿ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಅವಘಡದಿಂದ ಉಂಟಾದ ನಷ್ಟದ ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


Exit mobile version