ಬೆಂಗಳೂರು: ಕಳಸ ಬಂಡೂರಿ ಹಾಗೂ ಮಹದಾಯಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗೆ ಶನಿವಾರ ಕರೆ ನೀಡಿದ ಬಂದ್ ಗೆ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳು ಭಾರೀ ಬೆಂಬಲ ವ್ಯಕ್ತಪಡಿಸಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ, ಭಟ್ಕಳ, ರಾಯಚೂರು, ಬೀದರ್, ಕಾರವಾರ ಸೇರಿದಂತೆ ಹಲವೆಡೆ ಬಂದ್‍ನ ಬಿಸಿ ತಟ್ಟಿಲ್ಲ,
ಶನಿವಾರದಂದು ರಾಜ್ಯದಲ್ಲಿ ಅನೇಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಬೆಂಗಳೂರಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಮುಂಜಾನೆಯಿಂದ ಬಹುತೇಕ ಅಂಗಡಿ, ಮುಂಗಟ್ಟುಗಳು ಮುಚ್ಚಿ ಬಂದ್ ಗೆ ಬೆಂಬಲ ನೀಡಿದೆ. ಮೆಟ್ರೋ, ಆಟೋ, ಟ್ಯಾಕ್ಸಿ, ವಿರಳವಾಗಿ ರಸ್ತೆಗಿಳಿದಿದೆ.
ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿರುವ ಕಾರಣ ಅನೇಕ ಜನರು ಬಸ್ಸಿಲ್ಲದೇ ಪರಡಾಡುವಂತಹ ಸ್ಥಿತಿ ಎದುರಾಗಿದೆ. ಇನ್ನು ಕಳಸ ಬಂಡೂರಿ ಯೋಜನೆ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‍ನಿಂದಾಗಿ ಬಸ್ಸುಗಳಿಲ್ಲದ ಜನರು ಜೀವನ ಅಸ್ತವ್ಯಸ್ತಗೊಂಡಿದೆ.
ಕರಾವಳಿ ಜಿಲ್ಲೆಯಲ್ಲಿ ಎಂದಿನಂತೆ ಬಸ್ಸು ಸಂಚಾರ ಸುಗಮವಾಗಿ ಸಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಎಂದಿನಂತೆಯೆ ಕಾರ್ಯನಿರ್ವಹಿಸುತ್ತಿದೆ.


