Site icon Ullalavani

ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಾಯ…!!

ಮಂಗಳೂರು, ಏ. 18 : ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ವಾಮಂಜೂರು ಬಳಿಯ ಕೇತಿಕಲ್ ನಲ್ಲಿ ಏಪ್ರಿಲ್ 17 ರಂದು ನಡೆದಿದೆ.

ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಕೇತಿಕಲ್ ಬಳಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.ಡಿಕ್ಕಿಯ ಪರಿಣಾಮ ಆಟೋರಿಕ್ಷಾದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.ಘಟನೆ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version