ಮಂಗಳೂರು: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಅನುದಾನರಹಿತ ಕನ್ನಡ ಮಾಧ್ಯಮ ಸೈಯದ್ ಮದನಿ ಪ್ರೌಢಶಾಲೆ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 34 ಮಂದಿ ವಿದ್ಯಾರ್ಥಿಗಳಲ್ಲಿ 5 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ದರ್ಜೆ ಹಾಗೂ 10 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಶಾಲೆಗೆ ಶೇ.100 ಫಲಿತಾಂಶ ತಂದಿದ್ದಾರೆ.
ಇದಲ್ಲದೆ, ಕುಮಾರಿ ಸುಹಪಾತಿಮ ಅವರು 574 ಅಂಕಗಳನ್ನು ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಶಾಲೆಯ ಈ ಸಾಧನೆಗೆ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಟ್ರಸ್ಟ್ ಪದಾಧಿಕಾರಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

