Site icon Ullalavani

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌- ಕೇಜ್ರಿವಾಲ್‌ಗೆ ನೋಟಿಸ್

ನವದೆಹಲಿ,ಏ. 23; ನ್ಯಾಯಾಲಯದ ವಿಚಾರಣೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಹಿನ್ನೆಲೆ ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಹೊಸ ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಾದವನ್ನು ಮಂಡಿಸಿದ್ದರು. ಬಳಿಕ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.ನ್ಯಾಯಾಲಯದ ವಿಚಾರಣೆಯ ವಿಡಿಯೋಗಳನ್ನು ಹರಡುವುದು ನ್ಯಾಯಾಂಗದ ಗೌರವ ಮತ್ತು ಮಾನವನ್ನು ಕುಂಠಿತಗೊಳಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಆದ್ದರಿಂದ ಇಂತಹ ವಿಷಯಗಳನ್ನು ತಕ್ಷಣ ತೆಗೆದುಹಾಕಬೇಕು ಎಂದು ಆದೇಶಿಸಿದೆ. ನ್ಯಾಯಮೂರ್ತಿ ಸ್ವರ್ಣಾ ಕಾಂತಾ ಶರ್ಮಾ ಅವರು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವಿಡಿಯೋಗಳನ್ನು ತೆಗೆದುಹಾಕುವಂತೆ ಫೇಸ್‌ಬುಕ್, ಗೂಗಲ್, ಎಕ್ಸ್ ಸೇರಿದಂತೆ ಸಾಮಾಜಿಕ ಮಾಧ್ಯಮ ಮಧ್ಯಸ್ಥರಿಗೆ ಮತ್ತು ಸರ್ಚ್ ಎಂಜಿನ್‌ಗಳಿಗೆ ನಿರ್ದೇಶನ ನೀಡಿದ್ದಾರೆ.ಇನ್ನೂ ಪತ್ರಕರ್ತ ರವೀಶ್ ಕುಮಾರ್ ಸೇರಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ ಇತರ ವ್ಯಕ್ತಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ.

Exit mobile version