ಉಚ್ಚಿಲ ಸಮೀಪದ ಸೋಮೇಶ್ವರದಲ್ಲಿರುವ ಉಚ್ಚಿಲ ಬೋವಿ ವಿದ್ಯಾ ಸಂಸ್ಥೆ 2025–26ನೇ ಸಾಲಿನ SSLC ಪರೀಕ್ಷೆಯಲ್ಲಿ 100% ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಒಟ್ಟು 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗೆ ಆಡಳಿತ ಮಂಡಳಿ ಮತ್ತು ಅಧ್ಯಾಪಕ ವರ್ಗ ಸಂತಸ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಸ್ತನ್ನು ಶ್ಲಾಘಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ.
108 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಉಚ್ಚಿಲ ಬೋವಿ ವಿದ್ಯಾ ಸಂಸ್ಥೆ, ಸಮಾಜಕ್ಕೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಈ ಬಾರಿ ಪಡೆದಿರುವ ಫಲಿತಾಂಶ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.