ಉಳ್ಳಾಲ: ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಸಮಸ್ಯೆ ಆಗುತ್ತಿರುವುದರಿಂದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‌ನ ಮೇಲ್ಭಾಗದಲ್ಲಿ ಆಸ್‌ಪಾಲ್ಟ್ ವೆರಿಂಗ್ ಕೋಟ್ ಅಳವಡಿಸುವ ಕೆಲಸ ಮೇ.5ಮತ್ತು 6ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಈ ಎರಡು ದಿನಗಳವರೆ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದಿಸಲಾಗಿದೆ ಎಂದು ಹರೇಕಳ ಗ್ರಾಮ ಪಂಚಾಯಿತಿ ಪಿಡಿಒ ಮುತ್ತಪ್ಪ ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.