Site icon Ullalavani

ಇನ್ನೂ 10 ದಿನದಲ್ಲಿ ಮದುವೆ… ವರನ ದಾರುಣ ಅಂತ್ಯ..!!

ಹಾಸನ: ಕೆಲವೇ ದಿನಗಳಲ್ಲಿ ವಿವಾಹವಾಗಬೇಕಿದ್ದ ಯುವಕನೊಬ್ಬ ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ.


ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಮನು ಎಲ್.ಎನ್ (29) ಮೃತರು. ಮೇ 10ರಂದು ಆಲೂರು ತಾಲೂಕಿನ ತೊಗರನಹಳ್ಳಿ ಗ್ರಾಮದ ಕಾಂಚನ ಅವರೊಂದಿಗೆ ಮದುವೆ ನಿಶ್ಚಯವಾಗಿದ್ದು, ಎರಡು ಕುಟುಂಬಗಳಲ್ಲೂ ಮದುವೆ ಸಿದ್ಧತೆಗಳು ಜೋರಾಗಿ ನಡೆಯುತ್ತಿತ್ತು.

ಇಂದು ಬೆಳಗ್ಗೆ ಪ್ರೀ ವೆಡ್ಡಿಂಗ್ ಶೂಟ್‌ಗಾಗಿ ವಧುವನ್ನು ಕರೆತರಲು ಮನು ಅವರು ತಮ್ಮ ವಿರಾಟ್ ಬ್ರೆಝಾ ಕಾರಿನಲ್ಲಿ ಒಬ್ಬರೇ ತೆರಳುತ್ತಿದ್ದ ವೇಳೆ ಮಧ್ಯೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಾಶವಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Exit mobile version