ಇರಾ : ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿರುವ ದಿನೇಶ್ ಕಕ್ಕೆಮಜಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಹ್ಯೂಮನಿಟಿ ಫೌಂಡೇಶನ್ ಮಂಗಳೂರು ಅಧ್ಯಕ್ಷರಾದ ನಾಸೀರ್ ಅಹ್ಮದ್ ಸಾಮಾನಿ ಅವರು ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದರು.

ಈ ವೇಳೆ ಅವರು ಟ್ರಸ್ಟ್‌ನ ವಿವಿಧ ಕಾರ್ಯಕ್ರಮಗಳು, ಕಾರ್ಯಚಟುವಟಿಕೆಗಳು ಹಾಗೂ ದಾಖಲೆ ಪತ್ರಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಟ್ರಸ್ಟ್‌ನೊಂದಿಗೆ ಕೈಜೋಡಿಸಿ ಅದರ ಬೆಳವಣಿಗೆಗೆ ಸಹಕರಿಸುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಯು ಟ್ರಸ್ಟ್ ಅನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡಲಿದೆ ಎಂದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಯಾದವ ಅಸ್ಸೈಗೋಳಿ ಅವರು ಅತಿಥಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು. ಜೊತೆಗೆ ‘ಸಂವಿಧಾನ ಅರಿವು’ ಎಂಬ ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

