ಪತ್ತನಂತಿಟ್ಟ, ಮೇ. 06: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಂಗಳವಾರ ಮುಂಜಾನೆ ನಟ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ವ್ಯಾನ್ ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ನಟ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪತ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.1982ರಲ್ಲಿ ಬಿಡುಗಡೆಯಾದ ‘ಇದ್ ಞಂಙಳುಡೆ ಕಥಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂತೋಷ್ ಕೆ ನಾಯರ್ ಅವರು ಬಳಿಕ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಖಳನಾಯಕ ಹಾಗೂ ಹಾಸ್ಯಪಾತ್ರಗಳ ಮೂಲಕ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

