ಕೋಟೆಕಾರ್, ಮೇ 6:ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ), ಅಜ್ಜಿನಡ್ಕ ಇದರ 40ನೇ ವರ್ಷದ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಫಾದರ್ ಮಲ್ಲರ್ ಆಸ್ಪತ್ರೆ, ಕಂಕನಾಡಿ ಹಾಗೂ ಏನಫೋಯ ಮೆಡಿಕಲ್ ಕಾಲೇಜ್ ಮತ್ತು ಬ್ಲಡ್ ಡೋನರ್ಸ್ (ರಿ), ಮಂಗಳೂರು ಇವರ ಸಹಯೋಗದಲ್ಲಿ ನಡೆಯುವ ಈ ಶಿಬಿರವು ಮೇ 10 ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಅಜ್ಜಿನಡ್ಕದಲ್ಲಿ ನಡೆಯಲಿದೆ.
ಶಿಬಿರದಲ್ಲಿ ರಕ್ತದಾನಕ್ಕೆ ಅವಕಾಶವಿರುವುದರ ಜೊತೆಗೆ ಎಲುಬು ಮತ್ತು ನೇತ್ರ ತಪಾಸಣೆ ಸೇವೆಗಳು ಲಭ್ಯವಿದ್ದು, ಅಗತ್ಯವಿರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಜೊತೆಗೆ ಉಚಿತ ವೈದ್ಯಕೀಯ ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

