Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

UllalaVaniBy UllalaVaniMay 7, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಆಶಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಆರ್‌ ಡಿಎಫ್‌ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 36 ವರ್ಷಗಳಿಂದ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ. ಇದೀಗ ಶಿವಮೊಗ್ಗ ಹಾಗೂ ಹಾಸನ ವಿಸ್ತರಣೆಗೆ ಮುಂದಾಗಿದೆ. ಗ್ರಾಮೀಣ ಮಟ್ಟದಿಂದಲೇ ಅಭಿವೃದ್ಧಿ ಕಾರ್ಯಗಳು, ಜ್ಞಾನ ವೃದ್ಧಿ ಹಾಗೂ ಸಮಾಜ ಸೇವೆಯ ಕೆಲಸಗಳಾಗಬೇಕು ಅನ್ನುವ ಉದ್ದೇಶದೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್‌ ಖನ್ನಾ ತಿಳಿಸಿದರು.

ಅವರು ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ವತಿಯಿಂದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಇಂದು ಹಮ್ಮಿಕೊಂಡ “ಸ್ವಾವಲಂಬಿ 2026” ಮಹಿಳಾ ಉದ್ದಿಮೆದಾರರ ಸಮಾವೇಶ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತ ಸರ್ಕಾರದ ಮುಖ್ಯ ಉದ್ದೇಶ ಸಮಾಜದ ಪ್ರತಿಯೊಂದು ವರ್ಗದ ಅಭಿವೃದ್ಧಿಯಾಗಿದೆ. ನಾರಿ ಶಕ್ತಿಯ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. “ನಾರಿ ಸರ್ವತ್ರ ಪೂಜ್ಯತೆ” ಎಂಬ ತತ್ವದ ಆಧಾರದ ಮೇಲೆ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಯಾವ ದೇಶ, ಪ್ರದೇಶ ಅಥವಾ ಸಮಾಜ ನಾರಿ ಶಕ್ತಿಯನ್ನು ನಿರ್ಲಕ್ಷಿಸಿದೆ, ಅಲ್ಲಿ ವಿನಾಶದ ಸ್ಥಿತಿ ನಿರ್ಮಾಣವಾಗಿದೆ. ಎನ್‌ಆರ್‌ಎಲ್‌ಎಂ, ಎಸ್‌ಕೆಡಿಆರ್‌ಪಿ ಸೇರಿದಂತೆ ಹಲವು ಯೋಜನೆಗಳ ಮೂಲಕ ಮಹಿಳಾ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಬ್ಯಾಂಕ್ ವ್ಯವಸ್ಥೆಗಳ ಮೂಲಕ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲಾಗುತ್ತಿದೆ. ಮಹಿಳೆಯರು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ವಿಆರ್‌ಡಿಎಫ್ ಸಂಸ್ಥೆಯ ಬೋರ್ಡ್ ಸದಸ್ಯರು ಹಾಗೂ ಕಾರ್ಯದರ್ಶಿಗಳು ಎಲ್ಲರನ್ನು ಹಣಕಾಸು ಸಮಗ್ರತಾ ವ್ಯವಸ್ಥೆಗೆ ಒಳಪಡಿಸುವ ಅಗತ್ಯವಿದೆ . ಈಗಾಗಲೇ ಸಹಾಯ ಪಡೆದವರಿಗೆ ಆರ್ಥಿಕ ಸಬಲೀಕರಣ ಕಲ್ಪಿಸುವ ಕೆಲಸವೂ ನಡೆಯುತ್ತಿದೆ. ಸರ್ಕಾರದಿಂದ ಬಡ್ಡಿದರ ಸಬ್ಸಿಡಿ ಹಾಗೂ ಬಂಡವಾಳ ಸಬ್ಸಿಡಿ ಸೌಲಭ್ಯಗಳೂ ದೊರೆಯುತ್ತಿವೆ. ವಿಆರ್‌ಡಿಎಫ್ ಸಂಸ್ಥೆಯ ಮುಖ್ಯ ಉದ್ದೇಶ ಹೆಚ್ಚಿನ ಜನರನ್ನು ಆರ್ಥಿಕ ವ್ಯವಸ್ಥೆಗೆ ಸಂಪರ್ಕಿಸಿ, ಸುರಕ್ಷತೆ ಒದಗಿಸುವುದಾಗಿದೆ. ಎಂಬುದು ಸಂಸ್ಥೆಯ ಆಶಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬಿ. ರಾಜೇಂದ್ರ ರೈ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಉಪ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶರ್ಮಾ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಇಂತಹ ತರಬೇತಿ ಮತ್ತು ಉದ್ಯಮಶೀಲತಾ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಿವೆ ಎಂದರು.
ಸಮಾವೇಶದಲ್ಲಿ ವಿವಿಧ ಕಾರ್ಯಗಾರಗಳಲ್ಲಿ ತರಬೇತಿ ಪಡೆದು ಸ್ವಉದ್ಯಮ ಆರಂಭಿಸಿದ ಮಹಿಳಾ ಉದ್ದಿಮೆದಾರರನ್ನು, ತರಬೇತುದಾರರನ್ನು ಅಭಿನಂದಿಸಲಾಯಿತು. ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನವೂ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎನ್‌ ಆರ್‌ ಎಲ್‌ ಎಮ್‌ ಜಿಲ್ಲಾ ವ್ಯವಸ್ಥಾಪಕರಾದ ಹರಿಪ್ರಸಾದ್, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮಂಡಳಿ ಸದಸ್ಯರಾದ ಗಿರಿಜಾತೆ ಭಂಡಾರಿ ಹಾಗೂ ಪ್ರತಿಷ್ಠಾನದ ಖಜಾಂಚಿ ಮತ್ತು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಪ್ರಾದೇಶಿಕ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ಪಂಕಜ್ ಕುಮಾರ್ ಉಪಸ್ಥಿತರಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿ ರಾಜ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಧನ್ಯವಾದಗೈದರು, ಚಂದ್ರಿಕಾ ರೈ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ತರಬೇತುದಾರರು, ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

By UllalaVaniMay 7, 20260

ಕುತ್ತಾರು ಮೇ 7: ಮುನ್ನೂರು ಗ್ರಾಮದ ಕುತ್ತಾರು ಪ್ರದೇಶದ ಕಂಪ ಮನೆತನದ ದೇವಪ್ಪ ಕಂಪ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಳ…

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026
1 2 3 … 1,900 Next
Automatic YouTube Gallery

ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!

ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
Now Playing
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ...
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
Now Playing
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ...
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ಮಂಡಲದಿoದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲು ಕರೆ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version