ಮಂಗಳೂರು: ಕೇಂದ್ರ ಸರ್ಕಾರದ ಎಸ್‌ಐಆರ್ ಮ್ಯಾಪಿಂಗ್ ಪ್ರಕ್ರಿಯೆಯು ಮೇ 11ರಂದು ಅಂತ್ಯಗೊಳ್ಳಲಿದ್ದು, ಮತದಾರರು ತಮ್ಮ ಹೆಸರು ಚುನಾವಣಾ ಪಟ್ಟಿಯಲ್ಲಿ ಮ್ಯಾಪಿಂಗ್ ಆಗಿರುವ ಬಗ್ಗೆ ತಮ್ಮ ವಾಸ್ತವ್ಯ ವ್ಯಾಪ್ತಿಯ ಬೂತ್ ಲೆವೆಲ್ ಅಧಿಕಾರಿ (ಬಿಎಲ್‌ಒ)ರನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಮನವಿ ಮಾಡಿದ್ದಾರೆ.

ಮ್ಯಾಪಿಂಗ್ ಆಗದಿದ್ದಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಂಡು ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಅಲ್ಲದೆ, ಈ ಕುರಿತು ಶುಕ್ರವಾರ ಜುಮಾ ನಮಾಝ್ ಬಳಿಕ ಪ್ರತಿ ಜಮಾಅತ್‌ನ ಮಸೀದಿಗಳಲ್ಲಿ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

