ಉಳ್ಳಾಲ:ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ಕಿನ್ಯ ಇದರ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ನಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ, ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಿನ್ಯ ಗ್ರಾಮದ ಉಕ್ಕುಡ ಎಂಬಲ್ಲಿ ನಡೆಯಿತು.


ಕುನಿಲ್ ಇಲ್ಡ್ ಅಕಾಡೆಮಿ ಉಪಾಧ್ಯಕ್ಷ ಪಿ.ಎಸ್. ಮೊಯ್ದಿನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಮೌಲ್ಯಗಳ ಬಗ್ಗೆ ವಿವರಿಸಿದರು.
ಅಳೇಕಲ ಮದನಿ ಪಿ.ಯು ಕಾಲೇಜು ಪ್ರಾಂಶುಪಾಲ ಅಬ್ದುಲ್ ಅಝೀಝ್ ಮಾತನಾಡಿ ಶೈಕ್ಷಣಿಕ ರಂಗದಲ್ಲಿ ಯಶಸ್ವಿಯಾಗಲು ಇರುವ ವಿವಿಧ ದಾರಿಗಳ ಬಗೆ ಮಾಹಿತಿ ನೀಡಿದರು.ಕಿನ್ಯ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಶುಭಾ ಕುಮಾರಿ ಶಾಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು,ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಬೇಕು ಎಂಬ ಗುರಿ ನನಗೆ ಇತ್ತು. ಇದಕ್ಕೆ 1970 ರಲ್ಲಿ ಶಾಸಕ ರಾಗಿದ್ದ ಯುಟಿ ಫರೀದ್ , ಸ್ಪೀಕರ್ ಯುಟಿ ಖಾದರ್ ಬೆಂಬಲ ನೀಡಿದ್ದಾರೆ. ಕಷ್ಟದ ಬದುಕಿನಲ್ಲಿ ಬೆಳೆದು ಬಂದ ನನಗೆ ಬಹಳಷ್ಟು ಮಂದಿ ಸಹಕಾರ ನೀಡಿದ್ದಾರೆ ಎಂದರು.
ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಆರಿಫ್ ಕಿನ್ಯ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಬೆಳ್ತಂಗಡಿ ಅನುಗ್ರಹ ಇನ್ಸಿಟ್ಯೂಷನ್ ನಿರ್ದೇಶಕ
ಮೊಹಮ್ಮದ್ ತೌಸೀಫ್ ಕಕ್ಕಿಂಜೆ,ಅಬ್ದುಲ್ ಖಾದರ್ ನಾವೂರ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಡಾ| ಹರೇಕಳ ಹಾಜಬ್ಬ, ನಿವೃತ್ತ ಹಿರಿಯ ಶಿಕ್ಷಕ ಮೊಹಮ್ಮದ್ ಮಾಸ್ಟರ್ ಕಲ್ಕಟ್ಟ, ಕುನಿಲ್ ಇಲ್ಡ್ ಅಕಾಡೆಮಿ ಉಪಾಧ್ಯಕ್ಷ ಪಿ.ಎಸ್. ಮೊಯ್ದಿನ್,ಚಾರ್ಟೆಡ್ ಅಕೌಂಟೆಂಟ್ ಅಬ್ದುಲ್ ಫವಾಝ್ ಕಿನ್ಯ ಅವರನ್ನು ಸನ್ಮಾನಿಸಲಾಯಿತು
ಇದೇ ವೇಳೆ ಅರ್ಹ ಫಲಾನುಭವಿಗಳಿಗೆ ಅಲ್ ಅಮೀನ್ ಸ್ಕಾಲರ್ ಶಿಪ್ ನೀಡಲಾಯಿತು. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಈ ಕಾರ್ಯಕ್ರಮ ದಲ್ಲಿ ಅಳೇಕಲ ಮದನಿ ಪಿ.ಯು ಕಾಲೇಜು ಪ್ರಾಂಶುಪಾಲ
ಅಬ್ದುಲ್ ಅಝೀಝ್, ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬೂಸಾಲಿ ಹಾಜಿ ಕಿನ್ಯ,ಪ್ರಧಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಖಾದರ್, ಸಲಫಿ ಜುಮ್ಮಾ ಮಸೀದಿ ಅಧ್ಯಕ್ಷ ಎನ್ ಕೆ ಮೊಹಮ್ಮದ್, ಉದ್ಯಮಿ ಮುಸಾ ಹಾಜಿ, ಕಿನ್ಯ ಮಜಲ್ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಕೆಡಿಪಿ ಸದಸ್ಯ ಹಮೀದ್ ಕಿನ್ಯ ಉಪಸ್ಥಿತರಿದ್ದರು
ಶಿಯಾನ್ ಮೊಯ್ದಿನ್ ಕಿರಾಅತ್ ಪಠಿಸಿದರು. ಅಬ್ಬಾಸ್ ಕಿನ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಮ್ತಿಯಾಝ್ ವಂದಿಸಿದರು.

