Site icon Ullalavani

ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ..! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ   ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

Exit mobile version