ಬೆಂಗಳೂರು: ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ವಿಠಲ್ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ಎಂದಿನಂತೆ ಜಿಮ್ ನಿಂದ ಬಂದ ಇವರಿಗೆ ಬಲಭುಜದ ಬಳಿ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇವರ ಕುಟಂಬ ಮೂಲಗಳು ತಿಳಿಸಿವೆ.
ಶಿವಣ್ಣ ಅವರು ಆರೋಗ್ಯವಾಗಿದ್ದು, ಯಾರೂ ಆತಂಕಪಡಬೇಕಾದ ಅವಶ್ಯಕತೆಯಿಲ್ಲ ಎಂದು ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.


