Site icon Ullalavani

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಇಳಿಕೆ…!!

ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ.

ಮುಖ್ಯಾಂಶಗಳು

ಬಿಯರ್ ದರದಲ್ಲಿ 20-25% ಇಳಿಕೆ

ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ.

ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಅಗ್ಗ

ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್‌ನ ಸ್ಕಾಚ್ ವಿಸ್ಕಿಗಳ ಬೆಲೆಯೂ ಶೇ. 20 ರಷ್ಟು ಕಡಿಮೆಯಾಗಿದೆ. ಉದಾಹರಣೆಗೆ, ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್‌ನ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿದೆ. ಇದು ಶ್ರೀಮಂತ ವರ್ಗದ ಮದ್ಯಪ್ರಿಯರಿಗೆ ದೊಡ್ಡ ಸಮಾಧಾನ ತಂದಿದೆ.

ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ಈ AiB ತೆರಿಗೆ ನೀತಿಯನ್ನು ಜಾರಿಗೆ ತಂದಿದೆ. ಈ ಹಿಂದೆ ಇದ್ದ 16 ತೆರಿಗೆ ಸ್ಲ್ಯಾಬ್‌ಗಳನ್ನು ಈಗ 8ಕ್ಕೆ ಇಳಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಸರ್ಕಾರ ನಿರ್ಧರಿಸಿದೆ.

Exit mobile version