Site icon Ullalavani

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ…..!!

ಮಂಗಳೂರು, ಮೇ. 16; ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 27 ಜಾನುವಾರುಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.


ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವ ಶಂಕೆ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಕಂಕನಾಡಿ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಮಾಹಿತಿ ಆಧಾರದ ಮೇಲೆ ಪೊಲೀಸರು ಜೆಪ್ಪಿನಮೊಗರು ಬಳಿ ಲಾರಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಯನ್ನು ತಪಾಸಣೆ ನಡೆಸಿದಾಗ, ಯಾವುದೇ ಸೂಕ್ತ ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ಪತ್ತೆಯಾಗಿವೆ.ಸದ್ಯ ಜಾನುವಾರು ಸಾಗಿಸುತ್ತಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಕರಾವಳಿಯಲ್ಲಿ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಂಘಟನೆಗಳು ಒತ್ತಾಯಿಸಿವೆ.

Exit mobile version