ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2025-26 ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್, ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಸನ್ಮಾನ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ 24 ರಂದು ಬೆಳಗ್ಗೆ 11ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಇವರಿಗೆ ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

