Site icon Ullalavani

ಉಳ್ಳಾಲ ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!!

ಉಳ್ಳಾಲ, ಮೇ 19: ಉಳ್ಳಾಲ ಸಮುದ್ರ ತೀರ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Exit mobile version