Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಮೇ.23ರಂದು ಕರಾವಳಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಏಕಕಾಲಕ್ಕೆ ಕೃಷ್ಣ ಜೆ ಪಾಲೇಮಾರ್‌ ಮಾಲೀಕತ್ವದ ಅದ್ಧೂರಿ ಸಭಾಭವನಗಳ ಲೋಕಾರ್ಪಣೆ

UllalaVaniBy UllalaVaniMay 21, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.
ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ ಮಾಡುತ್ತಿದೆ. ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಜ| ಎಸ್. ಅಬ್ದುಲ್ ನಜೀರ್ ಅವರು ಆಗಮಿಸಿ, ನಾಲ್ಕೂ ಸಭಾಂಗಣಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಈ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭವು ಮೇ23ರಂದು ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರಿನ ಮೇರಿಹಿಲ್‌ನ ಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.

ಗಣ್ಯರ ಮಹಾಸಂಗಮ:- ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜ ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವಾರು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೃಷ್ಣಾ ಜೆ ಪಾಲೆಮಾರ್ ತಿಳಿಸಿದ್ದಾರೆ.

1. ಪಾಲೆಮಾರ್ ಕನ್ವೆನ್ಶನ್ ಸೆಂಟರ್, ಮೇರಿಹಿಲ್, ಮಂಗಳೂರು:-ಅದ್ದೂರಿತನ ಮತ್ತು ಸಾಂಪ್ರದಾಯಿಕತೆಯ ಅದ್ಭುತ ಸಮ್ಮಿಲನವೇ ಮೇರಿಹಿಲ್‌ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್. ನೋಡುಗರ ಕಣ್ಣು ಸೆಳೆಯುವ ಮರದ ಕರಕುಶಲತೆಯಿಂದ ಕೂಡಿದ ಭವ್ಯ ಒಳಾಂಗಣ ವಿನ್ಯಾಸ ಇದರ ಪ್ರಮುಖ ಆಕರ್ಷಣೆಯಾಗಿದೆ. ಸಾಂಪ್ರದಾಯಿಕ ಮದುವೆ ಸಮಾರಂಭಗಳ ಜೊತೆಗೆ ಕಾರ್ಪೊರೇಟ್ ಶೈಲಿಯ ಹೈ-ಟೆಕ್ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತವಾಗಿದೆ.

2.ಪಾಲೆಮಾರ್ ಗಾರ್ಡನ್ ಮೊರ್ಗನ್ಸ್ ಗೇಟ್ :- ಸುಂದರವಾದ ಹೊರಾಂಗಣ ಈಜುಕೊಳ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ಬೃಹತ್ ಹಸಿರು ಮೈದಾನ.ಸುಂದರ ವಿನ್ಯಾಸದ ಪಾರಂಪರಿಕ ಕಟ್ಟಡಗಳು ಇಲ್ಲಿನ ವಿಶೇಷತೆಯಾಗಿದೆ.

3. ಪಾಲೆಮಾರ್ ಫಾರ್ಮ್ಸ್, ಸುರತ್ಕಲ್:-ನಗರ ಪ್ರದೇಶದ ವಾತಾವರಣದಿಂದ ದೂರವಿದ್ದು, ನಿಸರ್ಗದ ಮೌನ, ತಂಪಾದ ಗಾಳಿ, ಮರಗಳ ನೆರಳು ಹಾಗೂ ಪಕ್ಷಿಗಳ ಕಲರವದ ನಡುವೆ ಹಸಿರನ್ನು ಪ್ರೀತಿಸುವವರಿಗಾಗಿ ಸುರತ್ಕಲ್ ಸಮೀಪ 20 ಎಕರೆ ವಿಶಾಲವಾದ ಜಾಗ ದಲ್ಲಿ ಈ ಫಾರ್ಮ್ಸ್ ಸಿದ್ಧಗೊಂಡಿದೆ. ಆಪ್ತ ಒಡನಾಡಿಗಳೊಂದಿಗೆ ಆಚರಿಸುವ ಮದುವೆ, ಹೊರಾಂಗಣ ಕಾರ್ಯಕ್ರಮ ಗಳು, ಬರ್ತ್ಡೇ ಪಾರ್ಟಿಗಳು, ಮೆಹೆಂದಿ ಹಾಗೂ ಕೌಟುಂಬಿಕ ಸಮಾರಂಭಗಳಿಗೆ ಇದು ಸೂಕ್ತ ತಾಣ.

4. ನೇತ್ರಾವತಿ ಸಭಾಭವನ, ಕಡೆಕಾರ್, ಜೆಪ್ಪಿನಮೊಗರು:– ಮಂಗಳೂರಿನ ಜೀವನಾಡಿ ನೇತ್ರಾವತಿ ನದಿಯ ದಡದಲ್ಲಿರುವ ಜೆಪ್ಪಿನಮೊಗರಿನ ಕಡೆಕಾರ್ ಎಂಬ ಅತ್ಯಂತ ಪ್ರಶಾಂತ ಮತ್ತು ಪವಿತ್ರ ವಾತಾವರಣದಲ್ಲಿ ಈ ಸಭಾಂಗಣ ತಲೆಯೆತ್ತಿದೆ. ಒಂದು ಬದಿಯಲ್ಲಿ ನದಿಯ ತಣ್ಣನೆ ಗಾಳಿ, ಇನ್ನೊಂದು ಬದಿಯಲ್ಲಿ ಪುರಾತನ ದೇವಸ್ಥಾನವಿದ್ದು, ಇಡೀ ಪರಿಸರಕ್ಕೆ ದೈವಿಕ ಕಳೆಯನ್ನು ನೀಡುತ್ತದೆ. ವಿವಾಹ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸಂಗೀತ ಕಛೇರಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಅತ್ಯಂತ ಪ್ರಶಸ್ತವಾಗಿದೆ. ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಅನುಕೂಲವಾಗುವಂತೆ ಇದನ್ನು ನಿರ್ಮಿಸಲಾಗಿದೆ.

ವಾಹನ ಪಾರ್ಕಿಂಗ್. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಲ್ಕೂ ಸಭಾಭವನಗಳಲ್ಲಿ ಅತ್ಯಂತ ವಿಶಾಲವಾದ, ವ್ಯವಸ್ಥಿತವಾದ ಪಾರ್ಕಿಂಗ್ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ನೂರಾರು ವಾಹನಗಳು ಏಕಕಾಲದಲ್ಲಿ ಯಾವುದೇ ಗೊಂದಲವಿಲ್ಲದೆ ಬಂದು ಹೋಗಲು ಇಲ್ಲಿ ಮುಕ್ತ ಅವಕಾಶವಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯರಸ್ತೆಗಳ ಸಂಪರ್ಕಎಲ್ಲಾ ನಾಲ್ಕು ಸಭಾಭವನಗಳನ್ನು ನಗರದ ಪ್ರಮುಖ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ನಿರ್ಮಿಸಲಾಗಿದೆ. ಹಾಗಾಗಿ ದೂರದ ಊರುಗಳಿಂದ ಬರುವ ಅತಿಥಿಗಳು ಹೆಚ್ಚಿನ ಹುಡುಕಾಟವಿಲ್ಲದೆ, ಉತ್ತಮ ರಸ್ತೆ ಸಂಪರ್ಕದ ಮೂಲಕ ಅತ್ಯಂತ ಸುಲಭವಾಗಿ ಮತ್ತು ಸರಾಗವಾಗಿ ನಿಗದಿತ ಸಮಯಕ್ಕೆ ಸಭಾಭವನಗಳನ್ನು ತಲುಪಬಹುದು.

ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯ:-ಕಾರ್ಪೊರೇಟ್ ಶೈಲಿಯ ಅದ್ದೂರಿ ಈವೆಂಟ್‌ಗಳಿಂದ ಹಿಡಿದು ಜನಸಾಮಾನ್ಯರ ಸಣ್ಣ ಬಜೆಟ್‌ನ ಕಾರ್ಯಕ್ರಮ ಗಳವರೆಗೆ, ಪ್ರತಿಯೊಬ್ಬರ ಆರ್ಥಿಕ ಶಕ್ತಿಗೆ ತಕ್ಕಂತೆ ಇಲ್ಲಿ ಸಭಾಂಗಣಗಳು ಲಭ್ಯವಿವೆ. ಎಲ್ಲ ವರ್ಗದ ಜನರಿಗೂ ಕೈಗೆಟಕುವ ದರದ ಸಭಾಂಗಣಗಳನ್ನು ಇಲ್ಲಿ ರೂಪಿಸಲಾಗಿದೆ.

ಸರ್ವಧರ್ಮ ಸಮನ್ವಯ:-ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೇ ಎಲ್ಲಾ ಧರ್ಮ, ಜಾತಿ, ಸಮುದಾಯ ಹಾಗೂ ಎಲ್ಲಾ ಆರ್ಥಿಕ ಹಂತದ ಕುಟುಂಬಗಳಿಗೆ ಇಲ್ಲಿ ಸಮಾನ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶ ಹೊಂದಲಾಗಿದೆ. ಇದು ಸಭಾಭವನ ಮಾತ್ರವಲ್ಲ, ಸಾಮಾಜಿಕ ಕ್ರಾಂತಿ. ಇದು ಕೇವಲ ಕಟ್ಟಡಗಳ ಉದ್ಘಾಟನೆ ಯಲ್ಲ, ಮದುವೆ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಹೊಸ ಚಿಂತನೆ ಹಾಗೂ ಸಮಾನತೆಯನ್ನು ಪರಿಚಯಿಸುವ ಐತಿಹಾಸಿಕ ಸಾಮಾಜಿಕ ಚಳವಳಿಯಾಗಿದೆ. ಈ ಬೃಹತ್ ಯೋಜನೆಯಿಂದಾಗಿ ಕರಾವಳಿಯ ಡೆಕೋರೇಶನ್, ಕ್ಯಾಟರಿಂಗ್, ಫೋಟೋಗ್ರಾಫಿ, ಲೈಟಿಂಗ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳ ಸ್ಥಳೀಯ ಯುವಕರಿಗೆ ವ್ಯಾಪಕ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳು ಸೃಷ್ಟಿಯಾಗಲಿವೆ. ಸ್ಥಳೀಯ ಆರ್ಥಿಕತೆಗೆ ಈ ಸಭಾಭವನಗಳು ಮಹತ್ತರ ಕೊಡುಗೆ ನೀಡಲಿವೆ. ಈ ನಿಟ್ಟಿನಲ್ಲಿ ಇದು ಅಭಿವೃದ್ಧಿ ಪಥದಲ್ಲಿ ಸಾಗುವ ಹೊಸ ಅಧ್ಯಾಯದ ಆರಂಭವೂ ಹೌದು. ಅತೀ ಶೀಘ್ರದಲ್ಲಿಯೇ ಮಂಗಳೂರಿನ ಕಡಲ ತೀರದಲ್ಲಿ ತೆರೆದ ಸಭಾಂಗಣಇದೇ ಮೊದಲ ಬಾರಿಗೆ, ಕಡಲ ನಗರಿ ಮಂಗಳೂರಿನ ಸಮುದ್ರ ತೀರದಲ್ಲಿ ಅದ್ದೂರಿ, ಭವ್ಯ ಸಮಾರಂಭಗಳನ್ನು ನಡೆಸಲು ಸುಸಜ್ಜಿತ ತೆರೆದ ಸಭಾಂಗಣ ಸಿದ್ಧಗೊಳ್ಳುತ್ತಿದೆ. ಶೀಘ್ರದಲ್ಲೇ ಈ ಸಭಾಂಗಣವೂ ಸಾರ್ವಜನಿಕರಿಗಾಗಿ ಲಭ್ಯವಾಗ ಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿಕಾಸ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಜೆ.ಕೆ.ರಾವ್, ಕೊರಗಪ್ಪ, ಸೂರಜ್ ಕುಮಾರ್ ಕಲ್ಯ, ಜೆ.ಸಂತೋಷ್ ಕುಮಾರ್, ಲ್ಯಾಂಡ್ ಲಿಂಕ್ಸ್ ನ ಉಪಾಧ್ಯಕ್ಷ ಪ್ರದೀಪ್ ಪಾಲ್ ಮಾರ್ ಮೊದಲಾದವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಖಾಸಗಿ ಬಸ್ಸು ನೌಕರರ ಮಾಲೀಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಉಸ್ಮಾನ್‌ ಅಲ್ತಾಫ್‌

May 21, 2026

ಉಳ್ಳಾಲವಾಣಿ ವರದಿ ಫಲಶ್ರುತಿ ಶಾರದಾ ಬಸ್‌ ಮಾಲೀಕರಿಗೆ ಧನ್ಯವಾದ ಸಲ್ಲಿಸಿದ ಪ್ರಯಾಣಿಕರು

May 20, 2026

ಕೋಣಾಜೆ ಪಂಚಾಯತ್ ದೂರು ಕೊಟ್ಟರೂ ಪೊಲೀಸ್ ಇಲಾಖೆ ಮೌನ: ಮಂಗಳೂರು ವಿಶ್ವವಿದ್ಯಾಲಯ ತ್ಯಾಜ್ಯ ನಿರ್ವಹಣೆ ಪ್ರಕರಣದಲ್ಲಿ FIR ಯಾಕಿಲ್ಲ?

May 20, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
All News

ಮೇ.23ರಂದು ಕರಾವಳಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಏಕಕಾಲಕ್ಕೆ ಕೃಷ್ಣ ಜೆ ಪಾಲೇಮಾರ್‌ ಮಾಲೀಕತ್ವದ ಅದ್ಧೂರಿ ಸಭಾಭವನಗಳ ಲೋಕಾರ್ಪಣೆ

By UllalaVaniMay 21, 20260

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ…

ಖಾಸಗಿ ಬಸ್ಸು ನೌಕರರ ಮಾಲೀಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಉಸ್ಮಾನ್‌ ಅಲ್ತಾಫ್‌

May 21, 2026

ಉಳ್ಳಾಲವಾಣಿ ವರದಿ ಫಲಶ್ರುತಿ ಶಾರದಾ ಬಸ್‌ ಮಾಲೀಕರಿಗೆ ಧನ್ಯವಾದ ಸಲ್ಲಿಸಿದ ಪ್ರಯಾಣಿಕರು

May 20, 2026

ಕೋಣಾಜೆ ಪಂಚಾಯತ್ ದೂರು ಕೊಟ್ಟರೂ ಪೊಲೀಸ್ ಇಲಾಖೆ ಮೌನ: ಮಂಗಳೂರು ವಿಶ್ವವಿದ್ಯಾಲಯ ತ್ಯಾಜ್ಯ ನಿರ್ವಹಣೆ ಪ್ರಕರಣದಲ್ಲಿ FIR ಯಾಕಿಲ್ಲ?

May 20, 2026
1 2 3 … 1,930 Next
Automatic YouTube Gallery

ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವ

ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ; ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ದೇವಳದ ವಾರ್ಷಿಕೋತ್ಸವ

ದುರ್ಗಾನಮಸ್ಕಾರ ಪೂಜೆ ಸೇರಿದಂತೆ ಧಾರ್ಮಿಕ ಪೂಜಾಕೈಂಕರ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವ
Now Playing
ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವ
ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ; ವರ್ಷಂಪ್ರತಿ ...
ಉಳ್ಳಾಲ ಮೊಗವೀರ ಪಟ್ಣ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನ; ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ದೇವಳದ ವಾರ್ಷಿಕೋತ್ಸವ

ದುರ್ಗಾನಮಸ್ಕಾರ ಪೂಜೆ ಸೇರಿದಂತೆ ಧಾರ್ಮಿಕ ಪೂಜಾಕೈಂಕರ್ಯಗಳು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.22ರಿoದ ಕೊಂಡಾಣ ಶ್ರೀಪಿಲಿಚಾಮುಂಡಿ ದೈವಸ್ಥಾನದಲ್ಲಿ ವರ್ಷಾವಧಿ ಬಂಡಿ ಉತ್ಸವ
Now Playing
ಮೇ.22ರಿoದ ಕೊಂಡಾಣ ಶ್ರೀಪಿಲಿಚಾಮುಂಡಿ ದೈವಸ್ಥಾನದಲ್ಲಿ ವರ್ಷಾವಧಿ ಬಂಡಿ ಉತ್ಸವ
ಕೊಂಡಾಣ ಶ್ರೀಪಿಲಿಚಾಮುಂಡಿ ದೈವಸ್ಥಾನದಲ್ಲಿ ಮೇ.22ರಿಂದ ವರ್ಷಾವಧಿ ಬಂಡಿ ಉತ್ಸವ ...
ಕೊಂಡಾಣ ಶ್ರೀಪಿಲಿಚಾಮುಂಡಿ ದೈವಸ್ಥಾನದಲ್ಲಿ ಮೇ.22ರಿಂದ ವರ್ಷಾವಧಿ ಬಂಡಿ ಉತ್ಸವ ಆರಂಭ;ಕೊoಡಾಣ ಕಾರಣಿಕ ಕ್ಷೇತ್ರದಲ್ಲಿ ಮೂರು ದಿನಗಳ ಬಂಡಿ ಉತ್ಸವ

ಮೇ.24ರಂದು ವೈಭವದ ಬಂಟ ನೇಮ, ಪಿಲಿಚಾಮುಂಡಿ ದೈವದ ನೇಮಕ್ಕೆ ಸಕಲ ಸಿದ್ಧತೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version