ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಮುಹ್ಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯಲ್ಲಿ ನಡೆದ ಈದ್ ನಮಾಝ್‌ಗೆ ಇಸ್ಮಾಯಿಲ್ ಮುಸ್ಲಿಯಾರ್ ನೇತೃತ್ವ ವಹಿಸಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಸಹೋದರತ್ವ ಹಾಗೂ ಶಾಂತಿಯ ಸಂದೇಶ ಸಾರಿದರು. ಮಸೀದಿ ಆಡಳಿತ ಸಮಿತಿ ಹಾಗೂ ಸ್ಥಳೀಯರು ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು