ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಬೆಳ್ತಂಗಡಿ :ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಹಲವಾರು ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸುವಂತೆ ನೀಡಿದ್ದ ಕರೆಗೆ ವ್ಯಾಪಾಕ ಬೆಂಬಲ ವ್ಯಕ್ತವಾಗಿದೆ.
ಕೆಎಸ್‍ಆರ್‍ಟಿಸಿಯವರು ಬಸ್ ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಿಂದ ತೆರಳುವ ಯಾತ್ರಾರ್ಥಿಗಳಿಗೆ ತೀವ್ರ ಅಡಚಣೆ ಉಂಟಾಗಿದೆ. ಧರ್ಮಸ್ಥಳಕ್ಕೆ ಬರುವ ವಾಹನಗಳಿಗೆ ತಡೆ ಒಡ್ಡಲಾಗಿದ್ದು ಯಾತ್ರಾರ್ಥಿಗಳು ಪರದಾಡುವಂತಾಗಿದೆ.
ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು ಪರೀಕ್ಷೆಯನ್ನು ಮುಂದೂಡಲಾಗಿದೆ. ವಕೀಲರ ಸಂಘ ಬಂದ್‍ಗೆ ಬೆಂಬಲ ನೀಡಿರೋ ಹಿನ್ನಲೆಯಲ್ಲಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಿದ್ದಾರೆ.