Site icon Ullalavani

ಜೂನ್ 4ರಂದು ಮೆಸ್ಕಾಂ ಜನ ಸಂಪರ್ಕ ಸಭೆ

ಉಳ್ಳಾಲ, ಜೂ. 2: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಉಳ್ಳಾಲ ಹಾಗೂ ಕೊಣಾಜೆ ಉಪವಿಭಾಗಗಳ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಜನ ಸಂಪರ್ಕ ಸಭೆಯನ್ನು ಆಯೋಜಿಸಿದೆ.

ಈ ಸಭೆಯು ಜೂನ್ 4ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಳ್ಳಾಲ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ.) ಅವರ ಕಚೇರಿಯಲ್ಲಿ ನಡೆಯಲಿದೆ.

ಸಭೆಯಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ವಿದ್ಯುತ್ ಸರಬರಾಜು, ಬಿಲ್ಲಿಂಗ್, ಹೊಸ ಸಂಪರ್ಕ, ನಿರ್ವಹಣೆ ಸೇರಿದಂತೆ ವಿವಿಧ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಗ್ರಾಹಕರು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದಾಗಿದೆ.

ವಿದ್ಯುತ್ ಗ್ರಾಹಕರು ಈ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯುವ ಜೊತೆಗೆ ಇಲಾಖೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version