ಬೆಂಗಳೂರು, ಜೂ. 04; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು.

ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ ಆಶಿರ್ವಾದ ಪಡೆದು ತೆರಳಿದರು.ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

