ಮುನ್ನೂರು: ಮಕ್ಕಳ ಉತ್ತಮ ಶಿಕ್ಷಣ ಹಾಗೂ ಸುಗಮ ಕಲಿಕೆಗೆ ನೆರವಾಗುವ ಉದ್ದೇಶದಿಂದ ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಕುತ್ತಾರ್-ಮುನ್ನೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ, ಮುನ್ನೂರುಗೆ ಬೆಂಚ್ ಹಾಗೂ ಕುರ್ಚಿಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಸೌಕರ್ಯ ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟ್ರಸ್ಟ್ ಈ ಸಮಾಜಮುಖಿ ಸೇವಾ ಕಾರ್ಯವನ್ನು ಕೈಗೊಂಡಿದೆ. ಸಂಸ್ಥೆಯ ಈ ಕೊಡುಗೆಯನ್ನು ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿ, ಟ್ರಸ್ಟ್‌ನ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

