Site icon Ullalavani

ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಅಗತ್ಯ – ಪರಿಸರವಾದಿ ಕೃಷ್ಣಪ್ಪ

ಎಳವೆಯಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಮೂಡಿಸಬೇಕು. ಪರಿಸರ ಸ್ನೇಹಿ ಜೀವನಶೈಲಿಯ ಬಗ್ಗೆ ಆಸಕ್ತಿ ಮೂಡುವಂತೆ ಹೇಳಿದಾಗ ಮಕ್ಕಳಲ್ಲಿ ಪ್ರಕೃತಿಯ ಬಗ್ಗೆ ಪ್ರೀತಿ ಉಂಟಾಗುತ್ತದೆ ನೀರನ್ನು ಉಳಿಸುವುದರ ಬಗ್ಗೆ, ಪ್ಲಾಸ್ಟಿಕ್ ತ್ಯಾಜ್ಯಗಳ ದುಷ್ಪರಿಣಾಮಗಳ ಬಗ್ಗೆ, ಅತಿಯಾದ ವಾಹನ ಬಳಕೆ ಬಗ್ಗೆ, ಶಾಲೆ ಮತ್ತು ಮನೆಯಲ್ಲಿ ಅಗತ್ಯವಿಲ್ಲದಾಗ ದೀಪಗಳನ್ನು ಆರಿಸುವುದರ ಬಗ್ಗೆ ಮುಂತಾದ ದಿನ ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ನಾವುಗಳು ಮಾಡುವ ತಪ್ಪುಗಳನ್ನು ಸರಿ ಪಡಿಸಿ, ಅವುಗಳ ಬಗ್ಗೆ ಮಾರ್ಗದರ್ಶನ ನೀಡಿದಾಗ ಪರಿಸರ ಮೇಲೆ ದೊಡ್ಡ ಸಕರಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರಿಸರವಾದಿ ಕೃಷ್ಣಪ್ಪ ಅವರು ಅಭಿಪ್ರಾಯಪಟ್ಟರು.

ಇವರು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮುಖೇನ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮೋಹಿನಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ನಿಟ್ಟೆ ಎ ಬಿ ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಸಂಸ್ಥೆಯ ಹಿರಿಯ ಉಪನ್ಯಾಸಕರು ಡಾ. ಅನಂತು ಮತ್ತು ಡಾ. ರೂಪಾಲಿ ಡಿ ಇವರು ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕರಾದ ಶಿವಣ್ಣ ಧನ್ಯವಾದವಿತ್ತರು ,ಕೃಷ್ಣಶಾಸ್ತ್ರೀ ಕಾರ್ಯಕ್ರಮ ನಿರೂಪಿಸಿದರು
ಇದೇ ಸಂದರ್ಭದಲ್ಲಿ ಶಾಲೆಯ ಸುತ್ತ ಮುತ್ತ ಸ್ವಚ್ಛತೆಯನ್ನು ನಡೆಸಲಾಯಿತು.

Exit mobile version