Site icon Ullalavani

ಮುಡಿಪು : ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮುಡಿಪು : ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆ, ಮುಡಿಪು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಲಾಯಿತು.


ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಹಾಗೂ ರಕ್ಷಣೆಯ ಬಗ್ಗೆ ಸಂದೇಶ ನೀಡಲಾಯಿತು. ಕಾರ್ಯಕ್ರಮವು ಪರಿಸರ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕಿ ನಹಾದಾ, ಮುಖ್ಯ ಶಿಕ್ಷಕಿ ಸಫೂರಾ ಹಾಗೂ ಆಡಳಿತಾಧಿಕಾರಿ ಮೊಯ್ದೀನ್ ಉಪಸ್ಥಿತರಿದ್ದರು.

Exit mobile version