Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಮಂಗಳೂರು ಕಾಲೇಜ್ ಆಫ್ ನರ್ಸಿಂಗ್ ಹಾಗೂ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ ಪದವಿ ಮತ್ತು ಡಿಪ್ಲೊಮಾ ಪ್ರದಾನ ಸಮಾರಂಭ

UllalaVaniBy UllalaVaniJune 6, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ನರ್ಸಿಂಗ್‌ ವೃತ್ತಿಗೆ ಉತ್ತಮ ನಾಯಕತ್ವದ ಅಗತ್ಯವಿದೆ. ನಾಯಕತ್ವ ಗುಣಗಳು ಹಾಗೂ ವೃತ್ತಿಪರ ಅಭಿವೃದ್ಧಿಯ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳನ್ನು ತರಲು ಸಾಧ್ಯವಾಗುತ್ತದೆ. ಜೊತೆಗೆ ದಾದಿಯರ ಕೆಲಸದ ಪರಿಸ್ಥಿತಿಗಳು ಇನ್ನಷ್ಟು ಸುಧಾರಿಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಶ್ರೀಕಾಂತ್‌ ಫುಲಾರಿ ಹೇಳಿದರು.
ಕೊಣಾಜೆ ನಡುಪದವಿನ ಕೆಎಂಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿದ ಉಳ್ಳಾಲ ಚಾರಿಟೇಬಲ್ ಟ್ರಸ್ಟ್‌ನ ಘಟಕಗಳಾದ ಮಂಗಳೂರು ಕಾಲೇಜ್ ಆಫ್ ನರ್ಸಿಂಗ್ ಮತ್ತು ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ 2026ನೇ ಸಾಲಿನ ಪದವಿ ಹಾಗೂ ಡಿಪ್ಲೊಮಾ ಪದವಿ ಪ್ರದಾನ ನೆರವೇರಿಸಿ ಮಾತನಾಡಿದರು.

ಡಿಜಿಟಲ್‌ ಯುಗದಲ್ಲಿ ವೈದ್ಯಕೀಯ ಕ್ಷೇತ್ರವೂ ವೇಗವಾಗಿ ಬದಲಾಗುತ್ತಿದೆ. ಡಿಜಿಟಲ್‌ ಆರೋಗ್ಯ ಸೇವೆಗಳು, ಆಧುನಿಕ ವೈದ್ಯಕೀಯ ತಂತ್ರಜ್ಞಾನಗಳು ಹಾಗೂ ಹೊಸ ಆವಿಷ್ಕಾರಗಳ ಕುರಿತು ನರ್ಸರು ನಿರಂತರವಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರತಿಯೊಬ್ಬ ನರ್ಸ್‌ ಕರ್ನಾಟಕ ರಾಜ್ಯ ನರ್ಸಿಂಗ್‌ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಹೊಂದಿರಬೇಕು. ಆನ್‌ಲೈನ್‌ ಮೂಲಕ ನೋಂದಣಿ ಹಾಗೂ ನವೀಕರಣದ ಸೌಲಭ್ಯ ಲಭ್ಯವಿದ್ದು, ಮೂರು ವರ್ಷ ಅಥವಾ ಐದು ವರ್ಷಗಳಿಗೊಮ್ಮೆ ನವೀಕರಣ ಮಾಡಿಸಿಕೊಳ್ಳಬೇಕು.ನಿರಂತರವಾಗಿ ಕಲಿಯಿರಿ, ನಿಮ್ಮನ್ನು ನೀವು ನವೀಕರಿಸಿಕೊಳ್ಳಿ, ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ. ಆಗ ಮಾತ್ರ ನೀವು ಯಶಸ್ವಿ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಸಾಧ್ಯ” ಎಂದ ಅವರು ನರ್ಸಿಂಗ್‌ ವೃತ್ತಿಯು ಅತ್ಯಂತ ಶ್ರೇಷ್ಠ ಹಾಗೂ ಗೌರವಾನ್ವಿತ ವೃತ್ತಿಯಾಗಿದ್ದು, ಸೇವಾ ಮನೋಭಾವ, ಕರುಣೆ ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ . 1980ರ ದಶಕದಲ್ಲಿ ನರ್ಸಿಂಗ್‌ ವೃತ್ತಿಗೆ ಪ್ರವೇಶಿಸಿದ ಸಂದರ್ಭದಲ್ಲಿ ಪುರುಷ ನರ್ಸಿಂಗ್‌ ಸಿಬ್ಬಂದಿ ಬಹಳ ಕಡಿಮೆ ಸಂಖ್ಯೆಯಲ್ಲಿದ್ದರು. ಆದರೆ ಇಂದು ನರ್ಸಿಂಗ್‌ ವೃತ್ತಿಯು ಜಾಗತಿಕ ಮಟ್ಟದಲ್ಲಿ ಅತ್ಯಂತ ಗೌರವಾನ್ವಿತ ಹಾಗೂ ಸಮರ್ಪಿತ ವೃತ್ತಿಯಾಗಿ ಗುರುತಿಸಿಕೊಂಡಿದೆ. ಆಸ್ಪತ್ರೆಗಳ ಹೃದಯವೇ ದಾದಿಯರು. ಕೋವಿಡ್‌ ಮಹಾಮಾರಿಯ ಸಂದರ್ಭದಲ್ಲಿ ದಾದಿಯರು ಸಲ್ಲಿಸಿದ ಸೇವೆಯನ್ನು ಇಡೀ ವಿಶ್ವ ಕೊಂಡಾಡಿದ್ದು, ಆರೋಗ್ಯ ಕ್ಷೇತ್ರದಲ್ಲಿ ಅವರ ಪಾತ್ರ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ ಅವರು ವಿದ್ಯಾರ್ಥಿಗಳ ಸಾಧನೆಯ ಹಿಂದೆ ಅಧ್ಯಾಪಕರ ಶ್ರಮ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸುತ್ತದೆ. ಮಂಗಳೂರು ಕಾಲೇಜ್‌ ಆಫ್‌ ನರ್ಸಿಂಗ್‌ನಲ್ಲಿ ಪರಿಣತ ಅಧ್ಯಾಪಕರು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಯಶಸ್ಸು ಅವರ ಸಮರ್ಪಣೆಯ ಫಲವಾಗಿದೆ . ಕರ್ನಾಟಕದಲ್ಲಿ ಪ್ರಸ್ತುತ 686 ನರ್ಸಿಂಗ್‌ ಕಾಲೇಜುಗಳಿದ್ದು, ಪ್ರತಿವರ್ಷ ಸುಮಾರು 40 ಸಾವಿರ ನರ್ಸಿಂಗ್‌ ಪದವೀಧರರು ಹೊರಬರುತ್ತಿದ್ದಾರೆ. ಆದರೆ ಎಲ್ಲರೂ ಸಾಧಕರಾಗುವುದಿಲ್ಲ. ಸಾಧನೆಗೆ ನಿರಂತರ ಪರಿಶ್ರಮ, ಕೌಶಲ್ಯ ಅಭಿವೃದ್ಧಿ ಹಾಗೂ ವೃತ್ತಿಪರ ನಿಷ್ಠೆ ಅಗತ್ಯವಾಗಿದೆ .ಕೌಶಲ್ಯ ಪರಿಶೀಲನೆ ಮತ್ತು ಕೌಶಲ್ಯ ವೃದ್ಧಿಯು ವೃತ್ತಿ ಜೀವನದ ಆರಂಭಿಕ ಹಂತವಾಗಿದ್ದು, ವಿದ್ಯಾರ್ಥಿಗಳು ನಿರಂತರವಾಗಿ ತಮ್ಮನ್ನು ತಾವು ಅಭಿವೃದ್ಧಿಪಡಿಸಿಕೊಳ್ಳಬೇಕು. ದೇಶದಷ್ಟೇ ಅಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮ ಉದ್ಯೋಗಾವಕಾಶಗಳು ಲಭ್ಯವಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ಟ್ರಸ್ಟಿಗಳಾದ ಡಾ.ಸಯ್ಯಿದ್‌ ಮೊಹಮ್ಮದ್‌ ಖಿಲಾರ್ ಮಾತನಾಡಿ ದ್ಯಾರ್ಥಿಗಳು ಇಂದು ಪಡೆಯುತ್ತಿರುವ ಪದವಿ ಕೇವಲ ಒಂದು ಪ್ರಮಾಣಪತ್ರವಲ್ಲ. ಅದರ ಹಿಂದೆ ಸಮರ್ಪಣೆ, ತ್ಯಾಗ, ಕಠಿಣ ಪರಿಶ್ರಮ ಹಾಗೂ ನಿರಂತರ ಕಲಿಕೆಯ ಮನೋಭಾವ ಅಡಗಿದೆ. ಈ ಸಾಧನೆಗೆ ವಿದ್ಯಾರ್ಥಿಗಳ ಜೊತೆಗೆ ಅಧ್ಯಾಪಕರ ಮಾರ್ಗದರ್ಶನ ಮತ್ತು ನಾಯಕತ್ವವೂ ಪ್ರಮುಖ ಕಾರಣವಾಗಿದೆ. ರ್ಸಿಂಗ್ ವೃತ್ತಿಯಲ್ಲಿ ಕೌಶಲ್ಯ, ಜ್ಞಾನ ಮತ್ತು ನಾಯಕತ್ವ ಗುಣಗಳು ಅತ್ಯಂತ ಮುಖ್ಯವಾಗಿದ್ದು, ವಿದ್ಯಾರ್ಥಿಗಳಲ್ಲಿ ಈ ಗುಣಗಳನ್ನು ಬೆಳೆಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾಗಿದೆ . ನರ್ಸಿಂಗ್ ಕ್ಷೇತ್ರದಲ್ಲಿ ನೇರವಾಗಿ ವೈದ್ಯರೊಂದಿಗೆ ಸಂವಹನ ನಡೆಸುವ ಸಾಮರ್ಥ್ಯ ಅಗತ್ಯ. ರೋಗಿಗಳ ಆರೈಕೆ, ಚಿಕಿತ್ಸಾ ಪ್ರಕ್ರಿಯೆ ಹಾಗೂ ವೈದ್ಯರ ನಿರ್ಧಾರಗಳ ಅನುಷ್ಠಾನದಲ್ಲಿ ನರ್ಸರು ಪ್ರಮುಖ ಕೊಂಡಿಯಾಗಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಕೌಶಲ್ಯಗಳನ್ನು ನಿರಂತರವಾಗಿ ವೃದ್ಧಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಪಾಧ್ಯಕ್ಷರು ಹಾಗೂ ಟ್ರಸ್ಟಿಗಳಾದ ಡಾ.ಆಲಂ ನವಾಝ್, ಟ್ರಸ್ಟಿಗಳಾದ ಟಿಟ್ಟೂ ಮ್ಯಾಥ್ಯೂ ಹಾಗೂ ಡಾ.ಅನಿತಾ ಟಿಟ್ಯೂ ಉಪಸ್ಥಿತರಿದ್ದರು. ಮಂಗಳೂರು ಕಾಲೇಜ್ ಆಫ್ ನರ್ಸಿಂಗ್ ಹಾಗೂ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲರಾದ
ಸಹಾಯಕ ಉಪನ್ಯಾಸಕಿ ಪ್ರೆಸಿಲ್ಲಾ ಸ್ವಾಗತಿಸಿದರು. ಪ್ರಿಯಾ ವಂದಿಸಿದರು. ಅಲೀನಾ ಜಾನ್‌ ನಿರೂಪಿಸಿದರು. ಕಾಲೇಜು ಪ್ರಾಂಶುಪಾಲೆ ಪ್ರೊ. ಮಲರ್ವಿ ಎಂ. ವಾರ್ಷಿಕ ವರದಿ ಮಂಡಿಸಿದರು.
ಈ ಸಮಾರಂಭದಲ್ಲಿ ಪದವಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಪದವಿಗಳನ್ನು ಪ್ರದಾನ ಮಾಡಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

July 27, 2026

ಗರಿಷ್ಠ ಮೊತ್ತಕ್ಕೆ ಕಾಪಿಕಾಡಿನ ಸಾಯಿ ಪ್ರಸಾದ್ ಖರೀದಿ ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಪ್ರತಿಭೆಗೆ ರಾಜ್ಯ ಮಟ್ಟದ ಮನ್ನಣೆ

July 25, 2026

Comments are closed.

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ರಾಮಕ್ಷತ್ರಿಯ ಸಮಾಜದ ‘ಬಿನ್ನವತ್ತಳೆ’ ಪುನರ್‌ಮುದ್ರಣಕ್ಕೆ ಚಾಲನೆ; ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಸಮಾನ ಮನಸ್ಕರ ನಿರ್ಧಾರ

By UllalaVaniJuly 27, 20260

ಕಾಸರಗೋಡು, ಜು.27: ರಾಮಕ್ಷತ್ರಿಯ ಸಮಾಜದ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ದಾಖಲೆಗಳನ್ನು ಒಳಗೊಂಡಿರುವ ಸಂಪಾದಿತ ಕೃತಿ ಬಿನ್ನವತ್ತಳೆಯನ್ನು ಪುನರ್‌ಮುದ್ರಿಸಲು ಹಾಗೂ…

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

July 27, 2026

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ; ಗ್ರಾಮಸ್ಥರಲ್ಲಿ ಆತಂಕ

July 27, 2026
1 2 3 … 2,036 Next
Automatic YouTube Gallery

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ; ರೋಹನ್ ಸಿಟಿಯಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮರ್ಪಣೆ

ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ
Now Playing
ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ
ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ; ರೋಹನ್ ...
ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ; ರೋಹನ್ ಸಿಟಿಯಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಗೌರವ ಸಮರ್ಪಣೆ

ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ
Now Playing
ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ
ಪ್ರೊ.ಎನ್. ಶ್ರೀಧರ್ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ;ನಿಟ್ಟೆ ಪರಿಗಣಿಸಲ್ಪಟ್ಟ ...
ಪ್ರೊ.ಎನ್. ಶ್ರೀಧರ್ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ;ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ.ಯ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version