ತೊಕ್ಕೊಟ್ಟು: ತೊಕ್ಕೊಟ್ಟು ಪಿಲಾರಿನ ಶ್ರೀ ಸಾಯಿಬಾಬಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ. ಅಳಿಯೂರು ಭೇಟಿ ನೀಡಿ, ಮಂದಿರದ ವಾರ್ಷಿಕ ಕಾರ್ಯಕ್ರಮದ ಅಂಗವಾಗಿ ವಿಶೇಷ ಸಭೆ ನಡೆಸಿದರು.
ಸಭೆಯಲ್ಲಿ ಸುತ್ತಮುತ್ತಲಿನ ಐದು ಗ್ರಾಮಗಳ ಭಜನಾ ಮಂಡಳಿಗಳನ್ನು ಒಗ್ಗೂಡಿಸಿ, ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಭಜನಾ ಪರಿಷತ್ತಿನ ಸಂಯೋಜನೆಯಲ್ಲಿ ಭವ್ಯ ಭಜನೋತ್ಸವ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಗ್ರಾಮ ಮಟ್ಟದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಸಲಹೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಂದಿರದ ಪ್ರಧಾನರಾದ ದಿನೇಶ್ ಶರ್ಮಾ, ಶ್ರೀಮತಿ ಸೌಮ್ಯ, ಭಜನಾ ಪರಿಷತ್ ಗೌರವ ಸಲಹೆಗಾರ ಸತೀಶ್ ದೀಪಂ, ವಲಯ ಮೇಲ್ವಿಚಾರಕರಾದ ಮೋಹನ್ ಕುಮಾರ್, ಸುನೀಲ್ ಭಟ್, ಶೈಲೇಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.